ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Mar 24, 2021 | 11:03 AM

ಮೈಸೂರು: ಜಿಲ್ಲೆಯ ರಿಂಗ್​ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್​ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖುದ್ದು ಮೈಸೂರು ನಗರ ಪೊಲೀಸ್​ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು, 112 ತುರ್ತು ಸ್ಪಂದನ ವಾಹನದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ದೇಹವನ್ನು ಶವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರಶಂಸನಾ ಪತ್ರ -ಸ್ವಾಮಿನಾಯಕ, ಎ.ಎಸ್.ಐ, ವಿ.ವಿ.ಪುರಂ ಸಂಚಾರ ಠಾಣೆ -ಮಾದೇಗೌಡ, ಎ.ಎಸ್.ಐ. ವಿ.ವಿ.ಪುರಂ ಸಂಚಾರ ಠಾಣೆ -ಲೋಕೇಶ್. ಎ.ಎಂ. ಸಿ.ಹೆಚ್.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಶಿವನಾಗ, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ರಮೇಶ್, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಗಣೇಶ್, ಹೆಚ್.ಆರ್, ಸಿ.ಹೆಚ್.ಸಿ. ವಿಜಯನಗರ ಠಾಣೆ -ಭಾಸ್ಕರ್, ಎ.ಪಿ.ಸಿ ಸಂಜೀವಿನಿ ತುರ್ತು ಚಿಕಿತ್ಸಾ ವಾಹನ ಚಾಲಕ -ಪಿ.ಮಂಜು, ಎ.ಪಿ.ಸಿ. 112 ವಾಹನ ಚಾಲಕನಿಗೆ ಪ್ರಶಂಸನಾ ಪತ್ರ ನೀಡಿ ಗೌರವ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ; ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಅರೆಸ್ಟ್

Published On - 9:59 am, Wed, 24 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್