ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ವೈ
ಮೈಸೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸಂಪ್ರದಾಯಿಕ ನಾಡಹಬ್ಬವನ್ನು ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಗೂ ಮುನ್ನ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಅಗ್ರ ಪೂಜೆಯಾಗಿ ನಂದಿಗೆ ಪೂಜೆ ಸಲ್ಲಿಸಿದ ಬಳಿಕ 3.40 ರಿಂದ […]
ಮೈಸೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸಂಪ್ರದಾಯಿಕ ನಾಡಹಬ್ಬವನ್ನು ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.
ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಗೂ ಮುನ್ನ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ.
ಅಗ್ರ ಪೂಜೆಯಾಗಿ ನಂದಿಗೆ ಪೂಜೆ ಸಲ್ಲಿಸಿದ ಬಳಿಕ 3.40 ರಿಂದ 4.15ರವರೆಗಿನ ಕುಂಭ ಲಗ್ನದಲ್ಲಿ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಚಾಲನೆ ನೀಡುತ್ತಾರೆ. ಬಳಿಕ ನಾಡದೇವತೆ ಚಾಮುಂಡೇಶ್ಚರಿಯ ಮೆರವಣಿಗೆ ಆರಂಭವಾಗುತ್ತೆ.
Published On - 3:04 pm, Mon, 26 October 20