ಡಾ ಸಿ.ಎನ್. ಮಂಜುನಾಥ್ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ಸಿಂಪಲ್ ಆಗಿ ದಸರಾ ನಡೆಯಲಿದೆ. ಕೊರೊನಾ ವೈರಸ್ ನಿಂದಾಗಿ ಸಿಂಪಲ್ ಆಗಿ ದಸರಾ ಆಚರಿಸಲಾಗುತ್ತಿದೆ. ಇದೀಗ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನ ಚಾಮುಂಡಿಬೆಟ್ಟದಲ್ಲಿ ಸರಳಾ ದಸರೆಗೆ ಚಾಲನೆ ನೀಡಲಾಗಿದೆ. 7.45 ರಿಂದ 8.15 ಕ್ಕೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕರು ಡಾ.ಸಿಎನ್ ಮಂಜುನಾಥ್ ಶುಭ ಬ್ರಾಹ್ಮೀ ಲಗ್ನದಲ್ಲಿ ದಸರಾ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ […]
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ಸಿಂಪಲ್ ಆಗಿ ದಸರಾ ನಡೆಯಲಿದೆ. ಕೊರೊನಾ ವೈರಸ್ ನಿಂದಾಗಿ ಸಿಂಪಲ್ ಆಗಿ ದಸರಾ ಆಚರಿಸಲಾಗುತ್ತಿದೆ. ಇದೀಗ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನ ಚಾಮುಂಡಿಬೆಟ್ಟದಲ್ಲಿ ಸರಳಾ ದಸರೆಗೆ ಚಾಲನೆ ನೀಡಲಾಗಿದೆ. 7.45 ರಿಂದ 8.15 ಕ್ಕೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕರು ಡಾ.ಸಿಎನ್ ಮಂಜುನಾಥ್ ಶುಭ ಬ್ರಾಹ್ಮೀ ಲಗ್ನದಲ್ಲಿ ದಸರಾ ಉದ್ಘಾಟನೆ ಮಾಡಿದ್ದಾರೆ.
ಈ ವೇಳೆ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಿಸಿ ರೋಹಿಣಿ ಸಿಂಧೂರಿ, ಮೈಸೂರು ಮೇಯರ್ ಸೇರಿದಂತೆ ಹಲವು ಗಣ್ಯರಿಂದ ದೇವಿಗೆ ಪುಷ್ಪಾರ್ಚನೆ ನೆರವೇರಿದೆ. ಕೊವಿಡ್ ನಿಯಮದಂತೆ ನಾಡಹಬ್ಬ ದಸರಾ ಉದ್ಘಾಟನೆ ಮಾಡಲಾಗಿದೆ.
Published On - 8:24 am, Sat, 17 October 20