ಪತ್ನಿ ಜತೆ ಅಕ್ರಮ ಸಂಬಂಧ: ಜಿ.ಪಂ ಅಧ್ಯಕ್ಷರ ಕಾರು ಚಾಲಕನ ಹತ್ಯೆ!

ಮೈಸೂರು: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕ ಸುನಿಲ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ರವಿಯ ಪತ್ನಿ ಜೊತೆ ಸುನಿಲ್ ಅಕ್ರಮ ಸಂಬಂಧ ಹೊಂದಿದ್ದನಂತೆ. ಹಾಗಾಗಿ ಚಾಲಕ ಸುನಿಲ್​ನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ರವಿ ತಪ್ಪು ಒಪ್ಪಿಕೊಂಡಿದ್ದಾನೆ. ಸುನಿಲ್ ಹಾಗೂ ರವಿ ಪತ್ನಿ ಮೊಬೈಲ್‌ನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದರು. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಇದ್ದಾಗ ಸಿಕ್ಕಿ ಬಿದ್ದಿದ್ದರು. ಈ ಬಗ್ಗೆ ಪತ್ನಿಗೆ ಹಾಗೂ ಸುನಿಲ್‌ಗೆ ಬುದ್ಧಿವಾದ ಹೇಳಿದ್ದೆ. ಆದರೆ ತನಗೆ ಪ್ರಭಾವಿಗಳ ಪರಿಚಯ ಇದೆ […]

ಪತ್ನಿ ಜತೆ ಅಕ್ರಮ ಸಂಬಂಧ: ಜಿ.ಪಂ ಅಧ್ಯಕ್ಷರ ಕಾರು ಚಾಲಕನ ಹತ್ಯೆ!
Follow us
ಸಾಧು ಶ್ರೀನಾಥ್​
|

Updated on:Feb 10, 2020 | 11:01 AM

ಮೈಸೂರು: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕ ಸುನಿಲ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ರವಿಯ ಪತ್ನಿ ಜೊತೆ ಸುನಿಲ್ ಅಕ್ರಮ ಸಂಬಂಧ ಹೊಂದಿದ್ದನಂತೆ. ಹಾಗಾಗಿ ಚಾಲಕ ಸುನಿಲ್​ನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ರವಿ ತಪ್ಪು ಒಪ್ಪಿಕೊಂಡಿದ್ದಾನೆ.

ಸುನಿಲ್ ಹಾಗೂ ರವಿ ಪತ್ನಿ ಮೊಬೈಲ್‌ನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದರು. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಇದ್ದಾಗ ಸಿಕ್ಕಿ ಬಿದ್ದಿದ್ದರು. ಈ ಬಗ್ಗೆ ಪತ್ನಿಗೆ ಹಾಗೂ ಸುನಿಲ್‌ಗೆ ಬುದ್ಧಿವಾದ ಹೇಳಿದ್ದೆ. ಆದರೆ ತನಗೆ ಪ್ರಭಾವಿಗಳ ಪರಿಚಯ ಇದೆ ಎಂದು ಸುನಿಲ್ ಮಾತು ಕೇಳುತ್ತಿರಲಿಲ್ಲ. ಇವರಿಬ್ಬರ ಬಗ್ಗೆ ಊರಿನಲ್ಲಿ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ನನಗೆ ಅವಮಾನವಾಗಿತ್ತು. ಇದೇ ಕೋಪಕ್ಕೆ ಸುನಿಲ್​ನನ್ನು ಹತ್ಯೆ ಮಾಡಿದೆ ಎಂದು ರವಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಹಲ್ಲೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ: ಎರಡು‌ ದಿನದ ಹಿಂದೆ ಸುನಿಲ್, ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಬೇಕರಿಯೊಂದರಲ್ಲಿದ್ದಾಗ ಮಚ್ಚಿನಿಂದ ಕೊಚ್ಚಿ ರವಿ ಹತ್ಯೆ ಮಾಡಿದ್ದ. ಚಾಲಕ ಸುನಿಲ್ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ‌ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಹಲ್ಲೆಯ ಭೀಕರ ದೃಶ್ಯ ಬೇಕರಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ರವಿ ಈಗಾಗಲೇ ಬೀಚನಹಳ್ಳಿ ಪೊಲೀಸರ ವಶದಲ್ಲಿದ್ದಾನೆ.

Published On - 10:52 am, Mon, 10 February 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ