ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಹುಭಾಷಾ ನಟಿ ನಯನತಾರಾ ಸದ್ಯ ಟಾಲಿವುಡ್‌, ಕಾಲಿವುನಲ್ಲಿ ಸಾಕಷ್ಟು ಅಭಿಮಾಗಳನ್ನ ಹೊಂದಿದ್ದಾರೆ. ಈಗ ಈ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅಭಿಮಾನಿಗಳಿಗೆ ಸಿಹಿ ಸುದ್ದಿ ನಿಡೋಕೆ ರೆಡಿಯಾಗಿದ್ದಾರಂತೆ.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ
ನಿರ್ದೇಶಕ ವಿಗ್ನೇಶ್ ಶಿವನ್ ಮತ್ತು ನಟಿ ನಯನತಾರಾ
Follow us
ಆಯೇಷಾ ಬಾನು
|

Updated on:Jan 04, 2021 | 6:53 AM

ಬಹುಭಾಷಾ ನಟಿ ನಯನತಾರ ಮುಟ್ಟಿದ್ದೆಲ್ಲಾ ಚಿನ್ನ ಅನ್ನೋ ಹಾಗೇ ಅಭಿನಯಿಸಿದ ಹಲವು ಸಿನಿಮಾಗಳು ಸೂಪರ್‌ ಹಿಟ್‌ ಆಗಿವೆ. ಸಾಲು ಸಾಲು ಸಿನಿಮಾಗಳಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರೋ ನಯನತಾರಾ ಲೇಡಿ ಸೂಪರ್ ಸ್ಟಾರ್ ಅಂತಾನೇ ಫೇಮಸ್. ಟಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ಹಲವು ಸಿನಿಮಾ ಇಂಡಸ್ಟ್ರಿಯಲ್ಲಿ ಮೋಡಿ ಮಾಡಿರೋ ಚೆಲುವೆ ಈಗ ವೈವಾಹಿ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ದಾರಂತೆ.

ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಯನತಾರಾ ಡೀಪ್ ಲವ್ ನಲ್ಲಿ ಬಿದ್ದಿದ್ದಾರೆ ಅನ್ನೋ ಸುದ್ದಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ನಯನತಾರಾ ಹಾಗು ವಿಗ್ನೇಶ್ ಕಳೆದ ವರ್ಷ ಚೆನ್ನೈನಲ್ಲಿ ಹೊಸ ಮನೆಯೊಂದನ್ನ ಖರೀದಿಸಿ ವೈವಾಹಿಕ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ರು. ಕಳೆದ ವರ್ಷ ಅದಕ್ಕೂ ಬ್ರೇಕ್ ಬಿದ್ದುತ್ತು. ಈಗ ಮುಂದಿನ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡೋಕೆ ಈ ಜೋಡಿ ರೆಡಿಯಾಗಿದೆ ಅನ್ನೋ ಮಾತು ಬಲವಾಗಿ ಕೇಳಿ ಬರ್ತಿದೆ.

ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಸದ್ಯದ ಮಾಹಿತಿ ಪ್ರಕಾರ ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಲಿದ್ದು ಅವರ ಕುಟುಂಬದವರು ಹಾಗು ಆಪ್ತರು ಮಾತ್ರವೇ ನಯನತಾರಾ ಹಾಗು ವಿಗ್ನೇಶ್ ಮದುವೆಯಲ್ಲಿ ಭಾಗವಹಿಸೋಕೆ ಅವಕಾಶ ನೀಡಲಾಗುತ್ತಂತೆ.

ಈ ನಡುವೆ ಎಲ್ಲೇ ಹೋದ್ರು ಜೊತೆ ಜೊತೆಯಾಗಿ ಸುತ್ತಾಡಿ ಮನಸಾರೆ ಮೆಚ್ಚಿಕೊಂಡಿರೋ ಜೋಡಿ ಮುಂದಿನ ತಿಂಗಳು ಮದುವೆ ಆಗೋಕೆ ರೆಡಿಯಾಗಿದೆಯಂತೆ. ಒಟ್ನಲ್ಲಿ ಆಗಾಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಾಗ್ತಿದ್ದ ಜೋಡಿ ಈಗಲಾದ್ರೂ ಈ ಮಾತನ್ನು ನಿಜ ಮಾಡಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

Published On - 6:53 am, Mon, 4 January 21

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು