‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ. ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ […]

‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’
ಡಾ. ಕೆ ಸುಧಾಕರ್​
Follow us
ಸಾಧು ಶ್ರೀನಾಥ್​
|

Updated on:Jun 23, 2020 | 6:54 PM

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ.

ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದರೆ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ನಿರ್ದೇಶಕರಿಗೆ ಎಚ್ಚರಿಕೆ ನೀಡಿದ್ರು.

ಇನ್ನೂ ದೂರು ಬಂದಲ್ಲಿ ಕೆಎಎಸ್ ಅಧಿಕಾರಿಗಳ ನಿಗಾ ಹಾಕಬೇಕಾಗುತ್ತದೆ, ಎಚ್ರಾ! ಇನ್ನೂ ದೂರು ಬಂದಲ್ಲಿ ಸಂಸ್ಥೆಗಳ ಆಡಳಿತ ನೋಡಿಕೊಳ್ಳಲು ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದೂ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಲು ಸಹ ಇದೇ ವೇಳೆ ಸೂಚನೆ ಹೊರಬಿತ್ತು. ತಜ್ಞರು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೋಗುತ್ತಿಲ್ಲ ಎಂಬ ದೂರು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಡಾ. ಕೆ. ಸುಧಾಕರ್ ಅವರು ಹೋಮ್ ಕ್ವಾರಂಟೈನ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಖಾಸಗಿ ನಿವಾಸದಿಂದ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.

Published On - 6:53 pm, Tue, 23 June 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ