‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’

|

Updated on: Jun 23, 2020 | 6:54 PM

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ. ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ […]

‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’
ಡಾ. ಕೆ ಸುಧಾಕರ್​
Follow us on

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ.

ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದರೆ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ನಿರ್ದೇಶಕರಿಗೆ ಎಚ್ಚರಿಕೆ ನೀಡಿದ್ರು.

ಇನ್ನೂ ದೂರು ಬಂದಲ್ಲಿ ಕೆಎಎಸ್ ಅಧಿಕಾರಿಗಳ ನಿಗಾ ಹಾಕಬೇಕಾಗುತ್ತದೆ, ಎಚ್ರಾ!
ಇನ್ನೂ ದೂರು ಬಂದಲ್ಲಿ ಸಂಸ್ಥೆಗಳ ಆಡಳಿತ ನೋಡಿಕೊಳ್ಳಲು ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದೂ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಲು ಸಹ ಇದೇ ವೇಳೆ ಸೂಚನೆ ಹೊರಬಿತ್ತು. ತಜ್ಞರು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೋಗುತ್ತಿಲ್ಲ ಎಂಬ ದೂರು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಡಾ. ಕೆ. ಸುಧಾಕರ್ ಅವರು ಹೋಮ್ ಕ್ವಾರಂಟೈನ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಖಾಸಗಿ ನಿವಾಸದಿಂದ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.

Published On - 6:53 pm, Tue, 23 June 20