AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nidhi Subbaiah Profile: ಕನ್ನಡ ಬಿಗ್​ ಬಾಸ್​ ಮನೆಗೆ ಪಂಚರಂಗಿ ಬೆಡಗಿ ನಿಧಿ ಸುಬ್ಬಯ್ಯ

Bigg Boss Kannada Season 8, Nidhi Subbaiah Profile: 2010ರಲ್ಲಿ ತೆರೆಕಂಡ ಪಂಚರಂಗಿ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ತುಂಬಾನೇ ಹವಾ ಸೃಷ್ಟಿಸಿತ್ತು. ನಟಿ ನಿಧಿ ಸುಬ್ಬಯ್ಯಾಗೆ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು.

Nidhi Subbaiah Profile: ಕನ್ನಡ ಬಿಗ್​ ಬಾಸ್​ ಮನೆಗೆ ಪಂಚರಂಗಿ ಬೆಡಗಿ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 28, 2021 | 8:17 PM

Share

Bigg Boss Kannada Season 8, Nidhi Subbaiah Profile: ದಶಕಗಳ ಹಿಂದೆ ತೆರೆಕಂಡಿದ್ದ ಪಂಚರಂಗಿ ಸಿನಿಮಾ ಮೂಲಕ ಹೆಸರು ಮಾಡಿದ್ದ ನಟಿ ನಿಧಿ ಸುಬ್ಬಯ್ಯ ಈಗ ಬಿಗ್​ ಬಾಸ್​ ಮನೆ ಅತಿಥಿ. ಬಿಗ್​ ಬಾಸ್​ 7ನೇ ಸ್ಪರ್ಧಿಯಾಗಿ ನಿಧಿ ಮನೆ ಒಳಗೆ ತೆರಳಿದ್ದಾರೆ. ಈ ಮೂಲಕ ಅವರ ಸಿನಿಮಾ ಕೆರಿಯರ್​ ಮತ್ತೆ ಮೈಲೇಜ್​ ಪಡೆದುಕೊಳ್ಳುವ ಸಾಧ್ಯತೆ ಇದೆ. 2010ರಲ್ಲಿ ತೆರೆಕಂಡ ಪಂಚರಂಗಿ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ತುಂಬಾನೇ ಹವಾ ಸೃಷ್ಟಿಸಿತ್ತು. ಯೋಗರಾಜ್​ ಭಟ್​ ನಿರ್ದೇಶನದ ಈ ಸಿನಿಮಾ ಭಿನ್ನವಾಗಿ ಮೂಡಿ ಬಂದಿತ್ತು. ನಟಿ ನಿಧಿ ಸುಬ್ಬಯ್ಯಾಗೆ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ನಂತರ ಕೃಷ್ಣನ್​ ಮ್ಯಾರೇಜ್​ ಸ್ಟೋರಿ, ಅಣ್ಣಾ ಬಾಂಡ್​ ಸಿನಿಮಾದಲ್ಲೂ ನಿಧಿ ನಟಿಸಿದ್ದರು. ನಂತರ ನಿಧಿ ಮುಂಬೈಗೆ ಹಾರಿದರು. ಕೆಲ ಬಾಲಿವುಡ್​ ಚಿತ್ರಗಳಲ್ಲೂ ಅವರು ನಟಿಸಿ, ಮತ್ತೆ ಸ್ಯಾಂಡಲ್​​ವುಡ್​ಗೆ ಮರಳಿದ್ದರು. ಆಯುಷ್ಮಾನ್​ ಭವ ಅವರ ನಟನೆಯ ಕೊನೆಯ ಚಿತ್ರ.

ಬಿಗ್​ ಬಾಸ್​ ಮನೆ ಒಳಗೆ ಹೋಗಿ ಬಂದ ನಂತರ ಅನೇಕರು ವೃತ್ತಿಜೀವನ ಬದಲಾಗಿದೆ. ಸಿನಿಮಾ ಇಂಡಸ್ಟ್ರಿಯಲ್ಲಿ ಮೂಲೆಗುಂಪಾದವರು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈಗ ನಿಧಿ ಕೂಡ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಬಿಗ್​ ಬಾಸ್​ ಮೂಲಕ ಮತ್ತೆ ಮುನ್ನೆಲೆಗೆ ಬರುವ ಆಲೋಚನೆ ಅವರದ್ದು.

ನಾನು ಬಹಳಷ್ಟು ಖುಷಿಯಾಗಿದ್ದೇನೆ. ಜತೆಗೆ, ನರ್ವಸ್ ಕೂಡ ಆಗಿದ್ದೇನೆ. ನನಗೆ ಸಿಟ್ಟು ಜಾಸ್ತಿ. ಆದರೆ ಅಷ್ಟೇ ಬೇಗ ಕಡಿಮೆ ಆಗುತ್ತೆ ಎಂದು ನಿಧಿ ಸುಬ್ಬಯ್ಯ ಹೇಳಿಕೊಂಡರು. ಬಿಗ್ ಬಾಸ್ ಮನೆಗೆ ಬಂದಿರುವುದಕ್ಕೆ ಖುಷಿ ಮತ್ತು ನರ್ವಸ್ ಆಗಿರುವುದಾಗಿ ತಿಳಿಸಿದರು. ಸುಮಾರಾಗಿ ಅಡುಗೆ ಮಾಡಲು ಬರುತ್ತೆ. ಬಿಗ್ ಬಾಸ್ ಮನೆಯೊಳಗೆ ಜಗಳಗಳಾದರೆ ಹೊಂದಿಕೊಂಡು ಹೋಗಬೇಕಾಗುತ್ತೆ ಎಂದು ಹೇಳಿದರು. ಅವಳು ಬಹುಬೇಗ ಇತರರನ್ನು ನಂಬುತ್ತಾಳೆ. ಅದೇ ಕಷ್ಟ ಆಗಬಹುದು ಎಂದು ನಿಧಿ ತಾಯಿ ಹೇಳಿದರು.

ಬಿಗ್​ ಬಾಸ್​ ವೀಕ್ಷಣೆ ಮಾಡೋದು ಎಲ್ಲಿ? ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ 8ಕ್ಕೆ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್​ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಪ್ರತಿ ದಿನ ರಾತ್ರಿ 9:30ರಿಂದ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ. ಬಿಗ್​ ಬಾಸ್​ ಎಲ್ಲಿ ವೀಕ್ಷಣೆ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ.  ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ 8 ಪ್ರಸಾರವಾಗುತ್ತದೆ. ಆನ್​ಲೈನ್​ನಲ್ಲಿ ಬಿಗ್​ ಬಾಸ್​ ನೋಡಬೇಕು ಎಂದಾದರೆ ನೀವು ವೂಟ್​ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಜಿಯೋ ಟಿವಿಯಲ್ಲಿ ಕೂಡ ನೀವು ಬಿಗ್​ ಬಾಸ್​ ವೀಕ್ಷಣೆ ಮಾಡಬಹುದಾಗಿದೆ. ಜಿಯೋ ಟಿವಿಗೆ ತೆರಳಿ ಕಲರ್ಸ್​ ಕನ್ನಡ ಎಂದು ಸರ್ಚ್​ ಮಾಡಿದರೆ ಕಲರ್ಸ್​ ಕನ್ನಡ ವಾಹಿನಿ ಸಿಗಲಿದೆ. ಅದರಲ್ಲಿ ನೀವು ಬಿಗ್​ ಬಾಸ್​ ವೀಕ್ಷಿಸಬಹುದು.

ಇದನ್ನೂ ಓದಿ: Bigg Boss Kannada 8 Launch LIVE Updates: ಏಳನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆಗೆ ನಿಧಿ ಸುಬ್ಬಯ್ಯ

Aravind KP Profile: ಬಿಗ್ ಬಾಸ್ ಮನೆ ಪ್ರವೇಶಿಸಿದ ಅರವಿಂದ್ ಕೆ.ಪಿ. ಯಾರು?

Published On - 8:13 pm, Sun, 28 February 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್