AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 10, 2021 | 9:12 AM

Share

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್