AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿತಿನ್ ನಬಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿತ್ತು. ಹೀಗಾಗಿ, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ
Nitin Nabin
ಸುಷ್ಮಾ ಚಕ್ರೆ
|

Updated on:Jan 19, 2026 | 7:14 PM

Share

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ.

ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ ರಾಜಕೀಯದಲ್ಲಿ ಬಹಳ ಪ್ರಸಿದ್ಧರಾಗಿದ್ದಾರೆ. ಪಾಟ್ನಾದಲ್ಲಿ ಜನಿಸಿದ ಅವರು ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಮಗ. ತಮ್ಮ ತಂದೆಯ ಅಕಾಲಿಕ ಮರಣದ ನಂತರ ನಿತಿನ್ ನಬಿನ್ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು. ಆರ್​ಎಸ್​ಎಸ್​ ಹಿನ್ನೆಲೆಯೂ ಇರುವ ಅವರು ಕ್ರಮೇಣ ಪಕ್ಷದೊಳಗೆ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡರು.

ಇದನ್ನೂ ಓದಿ: BJP National President Election Date: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ

ನಿತಿನ್ ನಬಿನ್ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಖಾತೆಗಳನ್ನು ಹೊಂದಿದ್ದರು. ನಂತರ ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ನಂತ ಆ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಹಾರದಲ್ಲಿ ಜೆಡಿಯು ಜೊತೆಗಿನ ಬಿಜೆಪಿಯ ಮೈತ್ರಿಯನ್ನು ಕಾಯ್ದುಕೊಳ್ಳುವಲ್ಲಿಯೂ ನಿತಿನ್ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ. ಬಿಹಾರದಲ್ಲಿ ಎನ್​ಡಿಎ ಅಧಿಕಾರದಲ್ಲಿರಲು ನಿತಿನ್ ಅವರ ಕೊಡುಗೆಯೂ ಅಪಾರ. ಇದರ ಜೊತೆಗೆ ನಿತಿನ್ ನಬಿನ್ ಛತ್ತೀಸ್‌ಗಢದ ಬಿಜೆಪಿಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

ಕೇಂದ್ರ ಸಚಿವ ಜೆ.ಪಿ ನಡ್ಡಾ, ಹಿರಿಯ ನಾಯಕರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರೊಂದಿಗೆ ಇಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದರು. ಈ ಮೂಲಕ ಅವರು ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Mon, 19 January 26