Nivar Cyclone ರಾಜ್ಯದಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್:​ ಬೆಂಗಳೂರು ಸೇರಿ ಹಲವೆಡೆ ಬಿರುಸು ಮಳೆ ಸಾಧ್ಯತೆ

ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Nivar Cyclone ರಾಜ್ಯದಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್:​ ಬೆಂಗಳೂರು ಸೇರಿ ಹಲವೆಡೆ ಬಿರುಸು ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್
Edited By:

Updated on: Nov 26, 2020 | 11:49 AM

ಬೆಂಗಳೂರು: ನಿವಾರ್ ಚಂಡಮಾರುತದ ಭೀಕರ ಪರಿಣಾಮ ಸಿಲಿಕಾನ್ ಸಿಟಿಯನ್ನು ಮಂಕುಗೊಳಿಸಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಗಾಂಧಿನಗರ, ಕಾರ್ಪೋರೇಷನ್, ಮಲ್ಲೇಶ್ವರಂನಲ್ಲಿ ಮಳೆಯಾಗುತ್ತಿದೆ. ಮಳೆ ನಡುವೆ ವಾಹನ ಸವಾರರ ಪರದಾಡುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ನಿವಾರ್ ಚಂಡಮಾರುತ ವಾಯವ್ಯ ಭಾಗದತ್ತ ಸಂಚರಿಸಿ ದುರ್ಬಲಗೊಳುತ್ತೆ. ದಕ್ಷಿಣ ಒಳನಾಡಿನಲ್ಲಿ ಅಂತ್ಯವಾಗಲಿದೆ. ಹೀಗಾಗಿ ಆಂಧ್ರಪ್ರದೇಶ, ತಮಿಳುನಾಡು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚೆನ್ನೈನಲ್ಲಿ ನಾಳೆವರೆಗೆ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ

Published On - 11:47 am, Thu, 26 November 20