ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಹೌದು ಮೈಸೂರಿನಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ವಿಶೇಷ ಪೂಜೆಯನ್ನ ಮಾಡಲಾಗಿದೆ. ಮುಖ್ಯ ಆರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ಮತ್ತು ಅಭಿಷೇಕ ನಂತರ ದೇವಸ್ಥಾನವನ್ನ ಬಂದ್ ಮಾಡಿ ಸಾರ್ವಜನಿಕರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ
ಪ್ರತಿ ವರ್ಷ ಬೆಳಿಗ್ಗೆ 5.30ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ಅವಕಾಶ ಇರುತಿತ್ತು. ಆದ್ರೆ ಈ ಸಾರಿ ಬೆಳಿಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನ ಮುಗಿಸಲಾಗಿದೆ. ನಂತರ ಚಾಮುಂಡೇಶ್ವರಿ ದೇವಸ್ಥಾನದ ಆವರಣದ ಒಳಗೆಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಗಿದೆ. ಆದ್ರೆ ಜಿಲ್ಲಾಡಳಿತದ ಸಲಹೆ ಮೇರೆಗೆ ಈ ಬಾರಿ ಪ್ರಸಾದ ವಿತರಣೆಯನ್ನ ಮಾಡಿಲ್ಲ. ಇಷ್ಟೇ ಅಲ್ಲ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.
Published On - 1:07 pm, Fri, 10 July 20