
ಆನೇಕಲ್:ರಾಜ್ಯದ ರಾಜಧಾನಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಾ ಇದೆ. ಇದರಿಂದಾಗಿ ರಾಜ್ಯ ಸರ್ಕಾರ ಕೊರೊನಾ ಸೋಂಕಿತರಿಗಾಗಿಯೇ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ಕೋವಿಡ್ ಸೆಂಟರ್ಗಳನ್ನು ತೆರೆದಿದೆ.
ಆದರೆ ರಾಜ್ಯ ಸರ್ಕಾರ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದರಿಂದ ಕೋವಿಡ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರ ನಿರ್ಮಿಸಿರುವ ಕೋವಿಡ್ ಸೆಂಟರ್ಗಳು ಖಾಲಿ ಹೊಡೆಯುತ್ತಿವೆ.
ಇದು ಬೆಂಗಳೂರಿನ ಕಥೆಯಾದರೆ, ಇದೇ ಬೆಂಗಳೂರು ಪಕ್ಕದ ಆನೇಕಲ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ತಾಲೂಕಿನಲ್ಲಿ ಪ್ರತಿದಿನ 50ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯ ದಾರಿ ಹಿಡಿಯಬೇಕಾಗಿದೆ.
ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದಾಗಿ ಕೊರೊನಾ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗದೆ ಪರಿತಪಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಬೇಕೆಂದು ತಾಲೂಕಿನ ಜನರು ಆಗ್ರಹಿಸಿದ್ದಾರೆ.
Published On - 1:57 pm, Sat, 29 August 20