AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿ ಸಲ್ಲಿಕೆ; ಜನಸಂಖ್ಯೆ ಆಧಾರದ ಮೇಲೆ ಹಕ್ಕು ಹಂಚಲು ಕಾಂಗ್ರೆಸ್ ನಾಯಕರ ತಕರಾರಿಲ್ಲ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಪಕ್ಷದ ನಾಯಕರ್ಯಾರೂ ವರದಿಯನ್ನು ಅವೈಜ್ಞಾನಿಕ ಅಂತ ಹೇಳಿಲ್ಲ, ಆದರೆ ಅದರಲ್ಲಿ ಹೇಳಿರುವ ಸಂಗತಿಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಾಮರ್ಶೆ ಅಥವಾ ವೈಜ್ಞಾನಿಕ ತಿದ್ದುಪಾಟುಗಳನ್ನು ಮಾಡುವುದು ಸಾಧ್ಯವೇ ಅಂತ ಹೇಳಿದ್ದಾರೆ ಎಂದು ಖರ್ಗೆ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 29, 2024 | 4:56 PM

Share

ಬೆಂಗಳೂರು: ಇಡೀ ರಾಜ್ಯವೇ ಬಹಳ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಜಾತಿ ಗಣತಿ ವರದಿಯನ್ನು (Caste Census Report) ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ (Jayaprakash Hegde) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ಸಲ್ಲಿಸಿದ್ದಾರೆ. ವರದಿಯ ಸಲ್ಲಿಕೆ ಮತ್ತು ಅದರಲ್ಲಿರುವ ಶಿಫಾರಸ್ಸುಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟಿವಿ9 ವರದಿಗಾರ ಕೇಳಿದಾಗ, ಈಗಷ್ಟೇ ವರದಿ ಸಲ್ಲಿಕೆಯಾಗುತ್ತಿದೆ, ಅದರಲ್ಲಿರುವ ಮಾಹಿತಿ, ದತ್ತಾಂಶಗಳ ಬಗ್ಗೆ ಏನೂ ಗೊತ್ತಿಲ್ಲ, ಮೊದಲಿಗೆ ವರದಿಯಲ್ಲಿ ಏನಿದೆ ಅಂತ ನೋಡಬೇಕು, ಅದನ್ನು ಅಧ್ಯಯನ ಮಾಡಿದ ಬಳಿಕವೇ ಅಭಿಪ್ರಾಯಗಳನ್ನು ತಿಳಿಸಬಹುದು ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರ್ಯಾರೂ ವರದಿಯನ್ನು ಅವೈಜ್ಞಾನಿಕ ಅಂತ ಹೇಳಿಲ್ಲ, ಆದರೆ ಅದರಲ್ಲಿ ಹೇಳಿರುವ ಸಂಗತಿಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಾಮರ್ಶೆ ಅಥವಾ ವೈಜ್ಞಾನಿಕ ತಿದ್ದುಪಾಟುಗಳನ್ನು ಮಾಡುವುದು ಸಾಧ್ಯವೇ ಅಂತ ಹೇಳಿದ್ದಾರೆ. ಜನಸಂಖ್ಕೆಯ ಆಧಾರದ ಮೇಲೆ ಹಕ್ಕು ಹಂಚುವುದರ ಬಗ್ಗೆ ತಮ್ಮ ನಾಯಕರ ತಕಾರಾರಿಲ್ಲ ಎಂದು ಖರ್ಗೆ ಹೇಳಿದರು. ವರದಿಯನ್ನು ಒಮ್ಮೆ ಓದಿದ ಬಳಿಕವೇ ಅದರ ಅಧ್ಯಯನಕ್ಕೆ ಸಂಪುಟ ಉಪ ಸಮಿತಿ ರಚಿಸಬೇಕಾ ಅಥವಾ ಯಾವುದಾದರರು ಸಮಾಜ ವಿಜ್ಞಾನ ಸಂಸ್ಥೆಗೆ ಕೊಡಬೇಕಾ ಅಂತ ನಿರ್ಣಯ ತೆಗೆದುಕೊಳ್ಳಬಹುದು ಎಂದು ಖರ್ಗೆ ಹೇಳಿದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಕಾಂಗ್ರೆಸ್ ನಾಯಕರ ತಿರುಗೇಟು: ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ