‘ಹೊಸ ಡಿಸಿಎಂಗಳು ಬೇಡ, ಕತ್ತಿಗೆ ಗ್ಯಾರಂಟಿ, ಆದ್ರೂ ದಿಲ್ಲಿ ತೀರ್ಮಾನವೇ ಅಂತಿಮ’

|

Updated on: Jan 29, 2020 | 2:59 PM

ಬೆಳಗಾವಿ: ರಾಜ್ಯದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಹೊಸ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆಯಾಗುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಬಿಜೆಪಿಯ ಪ್ರಬಲ ನಾಯಕರು ಡಿಸಿಎಂ ಕನಸು ಕಾಣುತ್ತಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಹೊಸದಾಗಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಿಲ್ಲ. ಈಗಿರುವ ಮೂವರು ಡಿಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿ, ಬೈಎಲೆಕ್ಷನ್​ನಲ್ಲಿ […]

‘ಹೊಸ ಡಿಸಿಎಂಗಳು ಬೇಡ, ಕತ್ತಿಗೆ ಗ್ಯಾರಂಟಿ, ಆದ್ರೂ ದಿಲ್ಲಿ ತೀರ್ಮಾನವೇ ಅಂತಿಮ’
Follow us on

ಬೆಳಗಾವಿ: ರಾಜ್ಯದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಹೊಸ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆಯಾಗುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಬಿಜೆಪಿಯ ಪ್ರಬಲ ನಾಯಕರು ಡಿಸಿಎಂ ಕನಸು ಕಾಣುತ್ತಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಹೊಸದಾಗಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಿಲ್ಲ. ಈಗಿರುವ ಮೂವರು ಡಿಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿ, ಬೈಎಲೆಕ್ಷನ್​ನಲ್ಲಿ ಗೆದ್ದ ಬೆಳಗಾವಿ ಜಿಲ್ಲೆಯ ಮೂವರು ಶಾಸಕರೂ ಸಚಿವರಾಗ್ತಾರೆ. ಇದರ ಜತೆಗೆ ಉಮೇಶ್ ಕತ್ತಿಯೂ ಸಹ ಸಚಿವರಾಗುತ್ತಾರೆ ಎಂದು ಭರವಸೆ ನೀಡಿದ್ದಾರೆ.

ನಾಳೆ ದೆಹಲಿಗೆ ಬಿಎಸ್​ವೈ ಪ್ರಯಾಣ:
ಸಚಿವ ಸಂಪುಟ ವಿಸ್ತರಣೆ ನಿಧಾನವಾಗಿದೆ ಎನ್ನುತ್ತಿದ್ದಾರೆ. ಹೀಗಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಜತೆ ಮಾತನಾಡುತ್ತೇನೆ. ನಾಳೆ ಅಥವಾ ನಾಡಿದ್ದು ಸಂಪುಟ ವಿಸ್ತರಣೆಯಾಗಬಹುದು. ಆದ್ರೆ, ಉಪಚುನಾವಣೆಯಲ್ಲಿ ಗೆದ್ದಿರುವ ಯಾರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಹೈಕಮಾಂಡ್ ಹೇಳಿದರೆ ಸಂಪುಟದಿಂದ ಕೈಬಿಡಬಹುದು ಎನ್ನುವ ಮೂಲಕ ಇಬ್ಬರನ್ನ ಸಂಪುಟದಿಂದ ಕೈ ಬಿಡುವ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದರು.