AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ರೈಲುಗಳೇ ಓಡಾಡ್ತಿಲ್ಲ.. ಕೂಲಿಗಳ ಗತಿಯೇನು?

ಬೆಂಗಳೂರು: ಕೆಲಸ ಅರಸಿ ಬಂದ ಎಷ್ಟೋ ಬಡವರಿಗೆ ಬೆಂಗಳೂರು ಆಶ್ರಯ ನೀಡಿದೆ. ಆದರೆ ಕೊರೊನಾ ಸಂಕಷ್ಟದಿಂದ ದಿನ ಕೂಲಿ ಮಾಡುತ್ತಿದ್ದ ಮಂದಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ರೈಲ್ವೆ ಕೂಲಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ತಾತ್ಕಾಲಿಕವಾಗಿ ರೈಲು ಸಂಚಾರ ನಿರ್ಬಂಧಿಸಲಾಗಿದೆ. ಆದರೆ ಒಂದೊ ಎರಡೊ ರೈಲುಗಳು ಮಾತ್ರ ಸಂಚರಿಸುತ್ತಿವೆ. ರೈಲು ಸಂಚಾರ ನಿರ್ಬಂಧ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ರೈಲು ಪ್ರಯಾಣಿಕರನ್ನೇ ನಂಬಿದ್ದ ಕೂಲಿಗಳೀಗ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೂಲಿಗಳ ಸಂಪಾದನೆ ಶೂನ್ಯವಾಗಿದೆ. […]

ಕೊರೊನಾದಿಂದ ರೈಲುಗಳೇ ಓಡಾಡ್ತಿಲ್ಲ.. ಕೂಲಿಗಳ ಗತಿಯೇನು?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 25, 2020 | 8:00 PM

Share

ಬೆಂಗಳೂರು: ಕೆಲಸ ಅರಸಿ ಬಂದ ಎಷ್ಟೋ ಬಡವರಿಗೆ ಬೆಂಗಳೂರು ಆಶ್ರಯ ನೀಡಿದೆ. ಆದರೆ ಕೊರೊನಾ ಸಂಕಷ್ಟದಿಂದ ದಿನ ಕೂಲಿ ಮಾಡುತ್ತಿದ್ದ ಮಂದಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ರೈಲ್ವೆ ಕೂಲಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ತಾತ್ಕಾಲಿಕವಾಗಿ ರೈಲು ಸಂಚಾರ ನಿರ್ಬಂಧಿಸಲಾಗಿದೆ. ಆದರೆ ಒಂದೊ ಎರಡೊ ರೈಲುಗಳು ಮಾತ್ರ ಸಂಚರಿಸುತ್ತಿವೆ. ರೈಲು ಸಂಚಾರ ನಿರ್ಬಂಧ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ರೈಲು ಪ್ರಯಾಣಿಕರನ್ನೇ ನಂಬಿದ್ದ ಕೂಲಿಗಳೀಗ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೂಲಿಗಳ ಸಂಪಾದನೆ ಶೂನ್ಯವಾಗಿದೆ.

ನಿತ್ಯವೂ 40 ರೈಲು ಸಂಚರಿಸ್ತಿತ್ತು.. 3 ಲಕ್ಷ ಪ್ರಯಾಣಿಕರೂ ಬರುತ್ತಿದ್ದರು! ಈ ಹಿಂದೆ ಬೆಂಗಳೂರಿಗೆ ನಿತ್ಯ 35ರಿಂದ 40 ರೈಲುಗಳು ಸಂಚರಿಸುತ್ತಿದ್ದವು. ನಿತ್ಯವೂ 3 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕೂಲಿಗಳು ದಿನಕ್ಕೆ 800ರಿಂದ 1000 ರೂಪಾಯಿವರೆಗೆ ಸಂಪಾದಿಸುತ್ತಿದ್ದರು. ಆದ್ರೆ ಈಗ 100 ರೂಪಾಯಿ ಸಂಪಾದನೆಯೂ ಇಲ್ಲದಂತಾಗಿದೆ. ದಿನಕ್ಕೆ ಹತ್ತು ಜನಕ್ಕೆ ಕೆಲಸ ಸಿಕ್ಕರೆ ಉಳಿದ ಕೂಲಿಗಳಿಗೆ ಕೆಲಸವೇ ಇಲ್ಲಾ. ಮನೆ ಬಾಡಿಗೆ ಸೇರಿದಂತೆ ಜೀವನ ನಡೆಸೋದೆ ಕಷ್ಟವಾಗಿದೆ. ಕೊರೊನಾದಿಂದ ನೂರಾರು ಕೂಲಿಗಳು ಬೀದಿಗೆ ಬಿದ್ದಿದ್ದಾರೆ ಎನ್ನುತ್ತಾರೆ ರೈಲ್ವೆ ನಿಲ್ದಾಣದಲ್ಲಿನ ಕೂಲಿಗಳು.

Published On - 1:53 pm, Fri, 24 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ