ನಿಯಮ ಉಲ್ಲಂಘಿಸಿ ಪುತ್ರನ ಮದುವೆ: ಪಿ.ಟಿ ಪರಮೇಶ್ವರ್ ನಾಯ್ಕ್ ವಿರುದ್ಧ ದಾಖಲಾಗಿಲ್ಲ FIR

  • TV9 Web Team
  • Published On - 7:29 AM, 16 Jun 2020
ನಿಯಮ ಉಲ್ಲಂಘಿಸಿ ಪುತ್ರನ ಮದುವೆ: ಪಿ.ಟಿ ಪರಮೇಶ್ವರ್ ನಾಯ್ಕ್ ವಿರುದ್ಧ ದಾಖಲಾಗಿಲ್ಲ FIR

ದಾವಣಗೆರೆ: ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮದುವೆ ಸಮಾರಂಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್​ ಧರಿಸದೇ ಸಾವಿರಾರು ಮಂದಿ ಭಾಗಿಯಾಗಿದ್ರ. ಹೀಗಾಗಿ ಹರಪನಹಳ್ಳಿಯ ತಹಶೀಲ್ದಾರ್ ಅರಸೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೇಸ್ ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದ್ರೆ ಅಸಮರ್ಪಕ ದೂರು ಹಿನ್ನೆಲೆಯಲ್ಲಿ ಪೊಲೀಸರು FIR ದಾಖಲಿಸಿಲ್ಲ.

ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ನೇರವಾಗಿ ಪೊಲೀಸ್ ಠಾಣೆಗೆ ದೂರು ಕೊಡಲು ಬರುವುದಿಲ್ಲ. ಕೋರ್ಟ್ ಮೂಲಕ ದೂರು ಸಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಈ ಬಗ್ಗೆ ಕಂದಾಯ ಅಧಿಕಾರಿಗಳು ಕೋರ್ಟ್‌ಗೆ ದೂರು ಸಲ್ಲಿಸಿದರೆ, ಕೋರ್ಟ್‌ನಿಂದಲೇ ಆರೋಪಿಗಳಿಗೆ ನೋಟಿಸ್ ನೀಡಲಾಗುತ್ತೆ.

1 ತಿಂಗಳೊಳಗೆ ನೋಟಿಸ್‌ಗೆ ಉತ್ತರ ನೀಡುವುದಕ್ಕೆ ಅವಕಾಶ ನೀಡಲಾಗುತ್ತೆ. ಪ್ರಕರಣ ಸಂಬಂಧ ಕೋರ್ಟ್‌ಗೆ ಸಾಕ್ಷ್ಯಾಧಾರಗಳು ಸಿಗದಿದ್ದರೆ. ಪೊಲೀಸ್ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇರುತ್ತದೆ. ಆದರೆ ತಹಶೀಲ್ದಾರ್ ನೇರವಾಗಿ ಠಾಣೆಗೆ ದೂರು ನೀಡಿದ್ದಾರೆ. ಹೀಗಾಗಿ ಅರಸೀಕೆರೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಆದರೆ ಸೆಕ್ಷನ್ 269ರ ಅಡಿ ಪ್ರಕರಣ ದಾಖಲಿಸಬಹುದಿತ್ತು. ಆದ್ರೆ ಕೇಸ್ ದಾಖಲಾಗಿಲ್ಲ.

ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ನಡೆದ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿತ್ತು. ಮದುವೆಯಲ್ಲಿ ನೂರಾರು ಜನರು ಭಾಗಿಯಾಗಿದ್ರು. ಮಾಸ್ಕ್‌ ಧರಿಸದೆ, ವೈಯಕ್ತಿಕ ಅಂತರ ಕಾಪಾಡದೆ ನಿರ್ಲಕ್ಷ್ಯವಹಿಸಲಾಗಿತ್ತು. ಸಚಿವ ಶ್ರೀರಾಮುಲು ಸೇರಿ ಹಲವು ಸಚಿವರು ಮದುವೆಯಲ್ಲಿ ಭಾಗಿಯಾಗಿದ್ದರು.