‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ. ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಬೆಂಗಳೂರಿನಿಂದ ಶ್ರಮಿಕ ರೈಲು […]

‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’
ಭಾಸ್ಕರ್ ರಾವ್
ಸಾಧು ಶ್ರೀನಾಥ್​ Edited By:

Updated on: May 22, 2020 | 6:04 PM

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ.

ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಬೆಂಗಳೂರಿನಿಂದ ಶ್ರಮಿಕ ರೈಲು ಹೋಗಿದೆ. ಭಾನುವಾರವೂ ಶ್ರಮಿಕ ರೈಲು ಹೊರಡುತ್ತೆ. ಇದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ತಿಳಿಸಿದ್ದಾರೆ.

Published On - 5:56 pm, Fri, 22 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us