ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಎಕ್ಸಾಂ ಇದ್ದರೂ, ಇಲ್ಲವಾಗಿದೆ ಕೊರೊನಾ ಮುನ್ನೆಚ್ಚರಿಕೆ

ಮೈಸೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಶುರುವಾಗಲಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಾಗೂ ಕೊರೊನಾ ವಿರುದ್ಧ ಹೋರಾಡಲು ಮಾಡಿಕೊಳ್ಳಬೇಕಾದ ಕ್ರಮಗಳನ್ನು ಎಲ್ಲಾ ಎಕ್ಸಾಂ ಸೆಂಟರ್​ಗಳಲ್ಲಿ ಮಾಡಿಕೊಳ್ಳಲಾಗಿದೆ. ಆದರೆ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಲಾಗಿದೆ. ಖಾಸಗಿ ಕಾಲೇಜುಗಳಿಗಿರುವ ಜವ್ಬಾದಾರಿಯೂ ಸರ್ಕಾರಿ ಕಾಲೇಜುಗಳಿಗಿಲ್ಲವಾ ಎಂದು ಪೋಷಕರು ಪ್ರಶ್ನಿಸಿದ್ದಾರೆ. ಡಿಡಿಪಿಯು ಕಚೇರಿಯ ಆವರಣದಲ್ಲಿರುವ ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಸಲು ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ದ್ವಿತೀಯ […]

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಎಕ್ಸಾಂ ಇದ್ದರೂ, ಇಲ್ಲವಾಗಿದೆ ಕೊರೊನಾ ಮುನ್ನೆಚ್ಚರಿಕೆ
Follow us
ಆಯೇಷಾ ಬಾನು
|

Updated on:Jun 18, 2020 | 12:38 PM

ಮೈಸೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಶುರುವಾಗಲಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಾಗೂ ಕೊರೊನಾ ವಿರುದ್ಧ ಹೋರಾಡಲು ಮಾಡಿಕೊಳ್ಳಬೇಕಾದ ಕ್ರಮಗಳನ್ನು ಎಲ್ಲಾ ಎಕ್ಸಾಂ ಸೆಂಟರ್​ಗಳಲ್ಲಿ ಮಾಡಿಕೊಳ್ಳಲಾಗಿದೆ. ಆದರೆ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಲಾಗಿದೆ.

ಖಾಸಗಿ ಕಾಲೇಜುಗಳಿಗಿರುವ ಜವ್ಬಾದಾರಿಯೂ ಸರ್ಕಾರಿ ಕಾಲೇಜುಗಳಿಗಿಲ್ಲವಾ ಎಂದು ಪೋಷಕರು ಪ್ರಶ್ನಿಸಿದ್ದಾರೆ. ಡಿಡಿಪಿಯು ಕಚೇರಿಯ ಆವರಣದಲ್ಲಿರುವ ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಸಲು ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಇದ್ದರೂ ಇನ್ನು ಸಿಬ್ಬಂದಿ ಕಾಲೇಜು ಕಡೆ ಮುಖ ಮಾಡಿಲ್ಲ.

ವಿದ್ಯಾರ್ಥಿಗಳ ಕ್ರಮ ಸಂಖ್ಯೆ ನೋಟಿಸ್ ಬೋರ್ಡ್‌ಗೆ ಹಾಕಿಲ್ಲ. ಗೊಂದಲದಲ್ಲಿ ವಿದ್ಯಾರ್ಥಿಗಳು ಕಾಲೇಜು ಮುಂದೆ ನಿಂತಿರುವ ದೃಶ್ಯ ಕಂಡು ಬಂದಿದೆ. ಒಂದೆಡೆ ಖಾಸಗಿ ಕಾಲೇಜುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಕಂಡು ಬಂದರೆ. ಸರ್ಕಾರಿ ಕಾಲೇಜಿನಲ್ಲಿ ಮಾತ್ರ ಈ ವರೆಗು ಯಾವುದೇ ಮುಂಜಾಗ್ರತ ಕ್ರಮ ಕಾಣಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಡಿಸ್ಟೆನ್ಸ್ ಮಾರ್ಕ್ ಕೂಡ ಹಾಕಿಲ್ಲ.

ಪ್ರಾಂಶುಪಾಲ ಸೋಮಣ್ಣಗೆ ಪೋಷಕರಿಂದ ತರಾಟೆ: ಪರೀಕ್ಷಾ ಕೇಂದ್ರದ ಬಳಿ ಸೂಕ್ತ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಸೋಮಣ್ಣಗೆ ಪೋಷಕರು ತರಾಟೆಗೆ ತೆಗೆದುಕೊಂಡ್ರು. ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಮಾರ್ಗದರ್ಶನ ನೀಡಿಲ್ಲ. ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ದೈಹಿಕ ಅಂತರ ಮರೆತು ಪ್ರಾಂಶುಪಾಲರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 9:24 am, Thu, 18 June 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ