AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಸಂಭ್ರಮದಲ್ಲಿ ಅಪಾಯವನ್ನೇ ಮರೆತ ಜನ, ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸಂದಣಿ

ಬೆಂಗಳೂರು: ರಾಜ್ಯದಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಹಬ್ಬದ ಹಿನ್ನೆಲೆ K.R.ಮಾರ್ಕೆಟ್​ನಲ್ಲಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಬ್ಬದ ವಸ್ತುಗಳ ಖರೀದಿ ನೆಪದಲ್ಲಿ ಮಾರುಕಟ್ಟೆಗಳಲ್ಲಿ ಜನಜಾತ್ರೆಯೇ ಕಂಡು ಬರುತ್ತಿದೆ. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಹಾಮಾರಿ ಕೊರೊನಾಗೆ ಹೆದರದೆ ಸಿಲಿಕಾನ್ ಸಿಟಿ ಮಂದಿ ಮಾರುಕಟ್ಟೆಯಲ್ಲಿ ಗಿಜುಗುಡುತ್ತಿದ್ದಾರೆ. ಒಂದೇ ಸ್ಥಳದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಫೈನ್ ಹಾಕೋಕೆ, ಜನ ಸಂದಣಿ ನಿಯಂತ್ರಿಸಲು ಫೀಲ್ಡಿಗಿಳಿದ ಮಾರ್ಷಲ್​​ಗಳು ನಿಯಂತ್ರಿಸಲಾಗದೆ ಕೈ ಚೆಲ್ಲಿ ಸುಮ್ಮನಾಗಿದ್ದಾರೆ. ಕೊಯಂಬೇಡು ಮಾರ್ಕೆಟ್ ಆಗುತ್ತಾ ಕೆ.ಆರ್​.ಮಾರ್ಕೆಟ್? ಒಂದೇ […]

ಹಬ್ಬದ ಸಂಭ್ರಮದಲ್ಲಿ ಅಪಾಯವನ್ನೇ ಮರೆತ ಜನ, ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸಂದಣಿ
ಆಯೇಷಾ ಬಾನು
|

Updated on: Oct 25, 2020 | 9:20 AM

Share

ಬೆಂಗಳೂರು: ರಾಜ್ಯದಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಹಬ್ಬದ ಹಿನ್ನೆಲೆ K.R.ಮಾರ್ಕೆಟ್​ನಲ್ಲಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಬ್ಬದ ವಸ್ತುಗಳ ಖರೀದಿ ನೆಪದಲ್ಲಿ ಮಾರುಕಟ್ಟೆಗಳಲ್ಲಿ ಜನಜಾತ್ರೆಯೇ ಕಂಡು ಬರುತ್ತಿದೆ.

ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಹಾಮಾರಿ ಕೊರೊನಾಗೆ ಹೆದರದೆ ಸಿಲಿಕಾನ್ ಸಿಟಿ ಮಂದಿ ಮಾರುಕಟ್ಟೆಯಲ್ಲಿ ಗಿಜುಗುಡುತ್ತಿದ್ದಾರೆ. ಒಂದೇ ಸ್ಥಳದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಫೈನ್ ಹಾಕೋಕೆ, ಜನ ಸಂದಣಿ ನಿಯಂತ್ರಿಸಲು ಫೀಲ್ಡಿಗಿಳಿದ ಮಾರ್ಷಲ್​​ಗಳು ನಿಯಂತ್ರಿಸಲಾಗದೆ ಕೈ ಚೆಲ್ಲಿ ಸುಮ್ಮನಾಗಿದ್ದಾರೆ.

ಕೊಯಂಬೇಡು ಮಾರ್ಕೆಟ್ ಆಗುತ್ತಾ ಕೆ.ಆರ್​.ಮಾರ್ಕೆಟ್? ಒಂದೇ ದಿನ ತೆರೆದಿದ್ದ ತಮಿಳುನಾಡಿನ ಕೊಯಂಬೇಡು ಮಾರ್ಕೆಟ್​ನಲ್ಲಿ ಸಾವಿರಾರು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಅದೇ ರೀತಿ ಕೆ.ಆರ್​.ಮಾರುಕಟ್ಟೆ ಸಹ ಆಗುವ ಆತಂಕ ಶುರುವಾಗಿದೆ. ಕೊರೊನಾ ಭೀತಿಯಿಲ್ಲದೆ ನಿಯಮ ಪಾಲಿಸದೆ ಬೆಂಗಳೂರಿನ ಕೆ.ಆರ್​.ಮಾರುಕಟ್ಟೆಯಲ್ಲಿ ಜನಜಂಗುಳಿಯೇ ಕಂಡು ಬಂದಿದೆ. ಒಬ್ಬರಿಗೆ ಕೊರೊನಾ ಇದ್ದರೂ ಎಷ್ಟು ಜನರಿಗೆ ಹರಡಬಹುದು ಎಂಬ ಯೋಚನೆಯೂ ಇಲ್ಲದೆ ಜನ ಹಬ್ಬದ ಸಂಭ್ರಮದಲ್ಲಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!