ಹೊಸವರ್ಷದ ಸಂಭ್ರಮಕ್ಕೆ ಎಂ.ಜಿ.ರಸ್ತೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
ಬೆಂಗಳೂರು: ನಾಳೆ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 10ಯಿಂದ ಮಧ್ಯರಾತ್ರಿ 2ಗಂಟೆವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ಕರ್ತವ್ಯ ನಿರತ ಪೊಲೀಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಮೇಯೋ ಹಾಲ್, ಬ್ರಿಗೇಡ್ ರಸ್ತೆಯಲ್ಲಿರುವ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್, ಎಂ.ಜಿ.ರೋಡ್ ಜಂಕ್ಷನ್‌ನಿಂದ ಎಸ್‌ಬಿಐ ಸರ್ಕಲ್, ಓಲ್ಡ್ ಮದ್ರಾಸ್ […]
ಬೆಂಗಳೂರು: ನಾಳೆ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 10ಯಿಂದ ಮಧ್ಯರಾತ್ರಿ 2ಗಂಟೆವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ಕರ್ತವ್ಯ ನಿರತ ಪೊಲೀಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಮೇಯೋ ಹಾಲ್, ಬ್ರಿಗೇಡ್ ರಸ್ತೆಯಲ್ಲಿರುವ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್, ಎಂ.ಜಿ.ರೋಡ್ ಜಂಕ್ಷನ್‌ನಿಂದ ಎಸ್‌ಬಿಐ ಸರ್ಕಲ್, ಓಲ್ಡ್ ಮದ್ರಾಸ್ ರೋಡ್‌ನಲ್ಲಿರುವ ಎಸ್‌ಬಿಐ ಸರ್ಕಲ್, ರೆಸಿಡೆನ್ಸಿ ರಸ್ತೆಯಿಂದ ಶಂಕರ್‌ನಾಗ್ ಚಿತ್ರಮಂದಿರದವರೆಗೂ ಸಂಚಾರ ನಿರ್ಬಂಧಿಸಿ ನಗರ ಸಂಚಾರ ಪೊಲೀಸರಿಂದ ಆದೇಶ ಹೊರಡಿದೆ.
ವಾಹನ ನಿಲುಗಡೆ ನಿಷೇಧ: ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ರೆಸಿಡೆನ್ಸಿ ರಸ್ತೆ, ರಿಚ್ಮಂಡ್ ರಸ್ತೆ, ಇನ್ಫೆಂಟ್ರಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ಕಾಮರಾಜ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮೆಗ್ರಾತ್ ರಸ್ತೆ, ಕಮಿಷಿಯರೇಟ್ ರಸ್ತೆ, ಮಾರ್ಕನ್ ರಸ್ತೆ, ಮೈನ್ ಗಾರ್ಡ್ ಕ್ರಾಸ್ ರಸ್ತೆ, ಡಿಸ್ಪೆನ್ಸರಿ ರಸ್ತೆ, ಇಂದಿರಾನಗರ 100 ಅಡಿ ರಸ್ತೆ ಗಳನ್ನು ಸೂಚಿಸಲಾಗಿದೆ. ಅಲ್ಲದೆ ಪಾರ್ಕಿಂಗ್ ನಿಷೇಧಿಸಿರುವ ರಸ್ತೆಗಳಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲ್ಲಿಸಲು ಬಿಆರ್ವಿ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
Published On - 7:17 pm, Mon, 30 December 19