ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆ ಹಿರಿಯ ಕಾದಂಬರಿಗಾರ್ತಿ ಡಾ.ಗೀತಾ ನಾಗಭೂಷಣ ವಿಧಿವಶ

ಕಲಬುರಗಿ: ಹಿರಿಯ ಕಾದಂಬರಿಗಾರ್ತಿ ಡಾ. ಗೀತಾ ನಾಗಭೂಷಣ (78 ) ಕಳೆದ ರಾತ್ರಿ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಹೃದಯಾಘಾತದಿಂದ ಬಾರದ ಲೋಕಕ್ಕೆ ಹೋಗಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಎದೆನೋವು ಅಂತ ಹೇಳಿದ್ದ ಗೀತಾ ನಾಗಭೂಷಣರನ್ನು ತಕ್ಷಣವೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದರು ಅಂತ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮೇರುಕೊಂಡಿಯೊಂದು ಕಳಚಿದಂತಾಗಿದೆ. ಗೀತಾ […]

ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆ ಹಿರಿಯ ಕಾದಂಬರಿಗಾರ್ತಿ ಡಾ.ಗೀತಾ ನಾಗಭೂಷಣ ವಿಧಿವಶ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 29, 2020 | 1:25 PM

ಕಲಬುರಗಿ: ಹಿರಿಯ ಕಾದಂಬರಿಗಾರ್ತಿ ಡಾ. ಗೀತಾ ನಾಗಭೂಷಣ (78 ) ಕಳೆದ ರಾತ್ರಿ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಹೃದಯಾಘಾತದಿಂದ ಬಾರದ ಲೋಕಕ್ಕೆ ಹೋಗಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಎದೆನೋವು ಅಂತ ಹೇಳಿದ್ದ ಗೀತಾ ನಾಗಭೂಷಣರನ್ನು ತಕ್ಷಣವೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದರು ಅಂತ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮೇರುಕೊಂಡಿಯೊಂದು ಕಳಚಿದಂತಾಗಿದೆ.

ಗೀತಾ ನಾಗಭೂಷಣ, ಕಲಬುರಗಿ ತಾಲೂಕಿನ ಸಾವಳಗಿ ಎಂಬ ಪುಟ್ಟ ಹಳ್ಳಿಯಲ್ಲಿ ಮಾರ್ಚ್ 25,1942 ರಲ್ಲಿ ಶಾಂತಪ್ಪ, ಶರಣಮ್ಮದಂಪತಿಗಳ ಪ್ರೀತಿಯ ಮಗಳಾಗಿ ಜನಿಸಿದರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ. ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು.

ಪ್ರಶಸ್ತಿ ಗೌರವಗಳು ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ, ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಕೂಡಾ ವಹಿಸಿದ್ದರು. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು. ಇವರ ಬದುಕು ಎಂಬ ಕಾದಂಬರಿಗೆ 2004 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ.

ಕೋಲ್ಕತಾದ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ 2011-2012 ಡಾ. ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಪ್ರಶಸ್ತಿ 1,00,000 ಸ್ಮರಣಿಕೆಯನ್ನೊಳಗೊಂಡಿದೆ. ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಮೊದಲ ಮಹಿಳಾ ಸಾಹಿತಿ ಕೂಡಾ ಡಾ. ಗೀತಾ ನಾಗಭೂಷಣ. 31.೦3.2012 ರಂದು ಕೋಲ್ಕತ್ತಾದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಡಾ. ಗೀತಾ ನಾಗಭೂಷಣ ಅವರು 1968ರಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಗೀತಾ ನಾಗಭೂಷಣರ ‘ಹಸಿಮಾಂಸ ಮತ್ತು ಹದ್ದುಗಳು’ ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯಲ್ಲಿ ಡಾ. ಗೀತಾ ನಾಗಭೂಷಣರು ಹೇಳಿದ ಮಾತುಗಳು ಮಾರ್ಮಿಕವಾಗಿವೆ. “ವಚನಕಾರರು, ಹರಿದಾಸರು, ತತ್ವಪದಕಾರರು, ಜನಪದರು ಅಂದು ತಮ್ಮ ಸಾಹಿತ್ಯದಿಂದ ಸಾವಿರಾರು ವರ್ಷಗಳ ಉದ್ದಕ್ಕೂ ಮಾಡಿಕೊಂಡು ಬಂದ ಜನಜಾಗೃತಿ, ಶಾಂತಿ ಸೌಹಾರ್ದತೆ, ಪ್ರೀತಿ ವಾತ್ಸಲ್ಯ, ಕ್ರಾಂತಿ ಚಳುವಳಿಗಳ ಮೂಲಕ ಸುಧಾರಣೆ ಮತ್ತು ಜನಹಿತಕಾರ್ಯವನ್ನು ಇಂದಿನ ಸಾಹಿತಿಗಳೂ ಸಾಧಿಸಿ ತೋರಿಸಬೇಕಾಗಿದೆ.

ಬರೀ ಶಬ್ದಾಡಂಬರದ ರಂಜನೀಯ ಸಾಹಿತ್ಯ ನಮಗೆ ಬೇಡ, ಸಾಹಿತ್ಯ ಒಂದು ಮಾನಸಿಕ ಸುಧಾರಣೆಯ ಸಾಧನ. ಅದು ಸಮಾಜದ ಅಭ್ಯುದಯಕ್ಕಾಗಿ ದುಡಿಯುವಂತಾಗಬೇಕು. ವಿಜ್ಞಾನಿಯ ತಲೆ, ಸಂತನ ಹೃದಯ ಈ ದೇಶಕ್ಕೆ ಬೇಕು. ಬುದ್ಧನ ಕರುಣೆ, ಬಸವನ ಛಲ, ಬಾಬಾ ಸಾಹೇಬರ ಸ್ವಾಭಿಮಾನ ಮತ್ತು ಗಾಂಧೀಜಿಯ ಅಹಿಂಸೆಯ ತುಡಿತ ಈ ಎಲ್ಲವನ್ನೂ ಹುರಿಗೊಳಿಸಿ ಹೊಸೆದ ಹಗ್ಗದಿಂದಲೇ ನಾವು ಸರ್ವರ ಅಭ್ಯುದಯ ಸಾಧಿಸಬಲ್ಲ ನಭೋಸ್ಪರ್ಶಿ ವ್ಯವಸ್ಥೆಗೆ ಏಣಿ ಕಟ್ಟಬೇಕಾಗಿದೆ.” ಎಂದಿದ್ದರು.

Published On - 9:11 am, Mon, 29 June 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ