
ರಾಯಚೂರು: ನಿನ್ನೆ ಮಸ್ಕಿ ಹಳ್ಳದಲ್ಲಿ ಯುವಕನೊಬ್ಬ ಕೊಚ್ಚಿಹೋದ ಘಟನೆಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನೀರಾವರಿ ನಿಗಮದ ಅಧಿಕಾರಿಗಳು ತೋರಿದ ದಿವ್ಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬ ಆರೋಪ ಇದೀಗ ಕೇಳಬಂದಿದೆ.
ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಲಾಗುವುದು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ದುರ್ಗೇಶ್ ಭರವಸೆ ನೀಡಿದ್ದಾರೆ.
ಮಸ್ಕಿ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ ದುರ್ಗೇಶ್ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೆ ಮಸ್ಕಿ ಜಲಾಶಯದಿಂದ ಹೇಳದೆ ಕೇಳದೆ ನೀರು ರಿಲಿಸ್ ಮಾಡಿದ್ದಾರೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ನೀರಾವರಿ ನಿಗಮದ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಕೊಡುತ್ತೇವೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಂದು ದುರ್ಗೇಶ್ ಭರವಸೆ ನೀಡಿದ್ದಾರೆ.
ಮಸ್ಕಿ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ
Published On - 12:14 pm, Mon, 12 October 20