KRS Dam ಹೆಚ್ಚಿದ ಒಳಹರಿವು, ನದಿ ಪಾತ್ರದ ಜನತೆಗೆ ಅಧಿಕಾರಿಗಳ ವಾರ್ನಿಂಗ್
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ. ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ […]
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ.
ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ ಇದ್ದು ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಈಗ ಕೆಆರ್ಎಸ್ ಡ್ಯಾಂನ ಗರಿಷ್ಟ ನೀರಿನ ಮಟ್ಟ 124.80 ಅಡಿ ಇದೆ. ಆದ್ರೆ ಈಗಾಗಲೇ ನೀರು 114.80 ಅಡಿ ತಲುಪಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನದಿ ಪಾತ್ರದ ಜನತೆಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ.