ಅಧಿಕಾರಿಗಳ ಎಡವಟ್ಟು: ವರದಿಗೂ ಮುನ್ನ ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಿದವರಿಗೆ ಸೋಂಕು
ಬೀದರ್: ಕೊವಿಡ್ ವರದಿಗೂ ಮುನ್ನವೇ ಕ್ವಾರಂಟೈನ್‌ನಿಂದ ಜನರನ್ನು ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ಬಿಡುಗಡೆಯಾದ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ವರದಿ ಬರುವ ಮುನ್ನವೇ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಆದರೆ ನಿನ್ನೆ ಸಂಜೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್‌ನಲ್ಲಿ ಕೊರೊನಾ ಇರುವುದು ದೃಢವಾಗಿದೆ. ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಯಾದ ಬಳಿಕ ಈ ಮೂವರು ಗ್ರಾಮದ ತುಂಬಾ ಓಡಾಡಿದ್ದಾರೆ. ಹೀಗಾಗಿ ಅಧಿಕಾರಿಗಳ ಎಡವಟ್ಟಿಗೆ ಸ್ಥಳೀಯ ಆಡಳಿತದ […]
ಬೀದರ್: ಕೊವಿಡ್ ವರದಿಗೂ ಮುನ್ನವೇ ಕ್ವಾರಂಟೈನ್‌ನಿಂದ ಜನರನ್ನು ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ಬಿಡುಗಡೆಯಾದ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ವರದಿ ಬರುವ ಮುನ್ನವೇ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಆದರೆ ನಿನ್ನೆ ಸಂಜೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್‌ನಲ್ಲಿ ಕೊರೊನಾ ಇರುವುದು ದೃಢವಾಗಿದೆ. ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಯಾದ ಬಳಿಕ ಈ ಮೂವರು ಗ್ರಾಮದ ತುಂಬಾ ಓಡಾಡಿದ್ದಾರೆ. ಹೀಗಾಗಿ ಅಧಿಕಾರಿಗಳ ಎಡವಟ್ಟಿಗೆ ಸ್ಥಳೀಯ ಆಡಳಿತದ ವಿರುದ್ಧ ಗ್ರಾಮಸ್ಥರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published On - 7:27 am, Fri, 29 May 20