ಸಮಯಕ್ಕೆ ಸರಿಯಾಗಿ ಬಾರದ ಆ್ಯಂಬುಲೆನ್ಸ್‌, ಉಸಿರಾಟದ ಸಮಸ್ಯೆಯಿಂದ ವೃದ್ಧ ಸಾವು

| Updated By:

Updated on: Jun 29, 2020 | 1:59 PM

ಹಾಸನ: ಸಮಯಕೆ‌ ಸರಿಯಾಗಿ ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡ (60) ಮೃತ ದುರ್ದೈವಿ. ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ರಾಮೇಗೌಡರನ್ನ ಅವರ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಬೆಳಗ್ಗೆ 8 ಗಂಟೆಗೆ ಕರೆಮಾಡಿದ ಆ್ಯಂಬುಲೆನ್ಸ್‌ ಒಂದು ಗಂಟೆಗೂ ಹೆಚ್ಚು ಸಮಯ ತಡವಾಗಿ ಬಂದಿದೆ. ಮೃತನ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯೆ ಕೆಟ್ಟುನಿಂತ ಕಾರಣದಿಂದ ಆ್ಯಂಬುಲೆನ್ಸ್‌ ಬರಲಿಲ್ಲ ಎಂದು […]

ಸಮಯಕ್ಕೆ ಸರಿಯಾಗಿ ಬಾರದ ಆ್ಯಂಬುಲೆನ್ಸ್‌, ಉಸಿರಾಟದ ಸಮಸ್ಯೆಯಿಂದ ವೃದ್ಧ ಸಾವು
Follow us on

ಹಾಸನ: ಸಮಯಕೆ‌ ಸರಿಯಾಗಿ ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡ (60) ಮೃತ ದುರ್ದೈವಿ.

ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ರಾಮೇಗೌಡರನ್ನ ಅವರ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಬೆಳಗ್ಗೆ 8 ಗಂಟೆಗೆ ಕರೆಮಾಡಿದ ಆ್ಯಂಬುಲೆನ್ಸ್‌ ಒಂದು ಗಂಟೆಗೂ ಹೆಚ್ಚು ಸಮಯ ತಡವಾಗಿ ಬಂದಿದೆ. ಮೃತನ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯೆ ಕೆಟ್ಟುನಿಂತ ಕಾರಣದಿಂದ ಆ್ಯಂಬುಲೆನ್ಸ್‌ ಬರಲಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಮತ್ತೊಂದು ಆ್ಯಂಬುಲೆನ್ಸ್‌ ಬರಬೇಕಾಯ್ತು. ಅಷ್ಟರಲ್ಲಿ ಅಸ್ವಸ್ಥಗೊಂಡ ರಾಮೇಗೌಡ ಕೊನೆಯುಸಿರೆಳೆದಿದ್ದಾರೆ.