ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು: ಪತ್ನಿ ಗಂಭೀರ, ಪುತ್ರ ಬಚಾವ್
ತುಮಕೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್ ಪತ್ನಿ ಪವಿತ್ರಾ ಸ್ಥಿತಿ ಗಂಭೀರವಾಗಿದೆ. ಮಗ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೂತ್ರ ವಿಸರ್ಜನೆಗಾಗಿ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಇದೇ ವೇಳೆ ತುಮಕೂರು ತಾಲೂಕಿನ ಲಿಂಗದಹಳ್ಳಿಯಿಂದ ಕುಣಿಗಲ್ಗೆ ಬೈಕ್ ನಲ್ಲಿ ಬಂದ ಕುಟುಂಬ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್ ಪತ್ನಿ ಪವಿತ್ರಾ ಸ್ಥಿತಿ ಗಂಭೀರವಾಗಿದೆ. ಮಗ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮೂತ್ರ ವಿಸರ್ಜನೆಗಾಗಿ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಇದೇ ವೇಳೆ ತುಮಕೂರು ತಾಲೂಕಿನ ಲಿಂಗದಹಳ್ಳಿಯಿಂದ ಕುಣಿಗಲ್ಗೆ ಬೈಕ್ ನಲ್ಲಿ ಬಂದ ಕುಟುಂಬ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.