ಚಾಲಕನ ನಿಯಂತ್ರಣ ತಪ್ಪಿ Tata Ace ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂದ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಕ್ಕಿಗುಂದ ಬಳಿ ರೂಪ್ಲಪ್ಪ ಲಮಾಣಿ(65) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗದಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂದ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಕ್ಕಿಗುಂದ ಬಳಿ ರೂಪ್ಲಪ್ಪ ಲಮಾಣಿ(65) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದಲ್ಲದೆ ಅವಘಡದಲ್ಲಿ, ಐವರಿಗೆ ಗಾಯಗಳಾಗಿದ್ದು GIMS ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.