
ಹಾವೇರಿ: ಕ್ಯಾಂಟರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಾವಣಗಿ ಕ್ರಾಸ್ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಪ್ರಸನ್ನಗೌಡ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಸನ್ನಗೌಡ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 1:15 pm, Mon, 13 July 20