ಮಂಡ್ಯ: ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪವರ್ಮನ್ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಲೋಕೇಶ್(25) ಮೃತಪಟ್ಟಿದ್ದಾರೆ.
ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಮಾಹಿತಿ ನೀಡದೆ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ಪವರ್ ಆನ್ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗುತ್ತಿಗೆ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದು ಒಂದೂವರೆಯಾದ್ರೂ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಆಗಮಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 12:16 pm, Tue, 9 June 20