ಹೊಸಕೋಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ, 14 ಕೆಜಿ ಗಾಂಜಾ ವಶ

ಹೊಸಕೋಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ, 14 ಕೆಜಿ ಗಾಂಜಾ ವಶ

ಹೊಸಕೋಟೆ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಠಾಣೆ ಪೊಲೀಸರಿಂದ ಇಂದು ಹಲವೆಡೆ ದಾಳಿ ನಡೆದಿದೆ.

ಹೊಸಕೋಟೆ DYSP ನಿಂಗಪ್ಪ ಬಸಪ್ಪ ಸಕ್ರಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹೊಸಕೋಟೆ ಉಪವಿಭಾಗದ 3 ಸರ್ಕಲ್ ಇನ್ಸ್ಪೆಕ್ಟರ್, 6 PSI ಸೇರಿದಂತೆ 10 ತಂಡದಿಂದ ಏಕಕಾಲಕ್ಕೆ ಸುಮಾರು 25 ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಹೊಸಕೋಟೆ ನಗರ ಸೇರಿದಂತೆ ಗ್ರಾಮಾಂತರ ಭಾಗದ ಲಾಲ್ ಬಾಗ್ ದಾಸರಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಸುಮಾರು 14 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದೆ.

ದಾಸರಹಳ್ಳಿಯ ಮನೆಯೊಂದರಲ್ಲಿ 4 ಕೆಜಿಯಷ್ಟು ಗಾಂಜಾ ದೊರೆತಿದೆ. ಇನ್ನು ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದು, ಪರಾರಿಯಾದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click on your DTH Provider to Add TV9 Kannada