CM ಸ್ಥಾನದಿಂದ BSY ಕೆಳಗಿಳಿಯೋದು ಪಕ್ಕಾ.. ಆದ್ರೆ ಯಾವಾಗ ಅಂತಾ ಗೊತ್ತಿಲ್ಲ -ಸಿದ್ದರಾಮಯ್ಯ

ಸಿಎಂ ಬದಲಾವಣೆ ಆಗುತ್ತೆ ಆದ್ರೆ, ಯಾವಾಗ ಎಂದು ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುವುದು ಪಕ್ಕಾ ಎಂದು ಹೇಳಿದರು.

CM ಸ್ಥಾನದಿಂದ BSY ಕೆಳಗಿಳಿಯೋದು ಪಕ್ಕಾ.. ಆದ್ರೆ ಯಾವಾಗ ಅಂತಾ ಗೊತ್ತಿಲ್ಲ -ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
KUSHAL V
|

Updated on: Jan 03, 2021 | 10:03 PM

ಹುಬ್ಬಳ್ಳಿ: ಸಿಎಂ ಬದಲಾವಣೆ ಆಗುತ್ತೆ ಆದ್ರೆ, ಯಾವಾಗ ಎಂದು ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುವುದು ಪಕ್ಕಾ ಎಂದು ಹೇಳಿದರು. BSY ಪೂರ್ಣಾವಧಿ ಸಿಎಂ ಎಂಬ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​​​ ಹೇಳಿಕೆಗೆ ಅವರು ತೆಗೆದು ಹಾಕುತ್ತೇವೆ ಎಂದು ಹೇಳುವುದಕ್ಕೆ ಆಗುತ್ತಾ? ಎಂದು ಸಿದ್ದರಾಮಯ್ಯ ಟಾಂಗ್​ ಕೊಟ್ಟರು.

ಬಿಜೆಪಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸುತ್ತೆ‌. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಲ್ಲ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನಾವೇ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಹಳೇ ಮೈಸೂರು, ರಾಜ್ಯದಲ್ಲಿ ನಾವೇ ನಂಬರ್ 1. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು. NDA ಜೊತೆ HDK ಮೈತ್ರಿ ವಿಚಾರವಾಗಿ JDSನವರ ಬಗ್ಗೆ ನಾನು ಮಾತನಾಡಲ್ಲ ಎಂದು ಸುಮ್ಮನಾದರು.

ಮೀಸಲಾತಿ ಕೇಳೋದು ತಪ್ಪಲ್ಲ. ನಾನು ಸಿಎಂ ಆಗಿದ್ದಾಗ 4 ಸಮುದಾಯಗಳನ್ನ ಶಿಫಾರಸ್ಸು ಮಾಡಿದ್ದೆ‌. ಈಶ್ವರಪ್ಪ ಸದ್ಯ ಕೇಂದ್ರ ಸರ್ಕಾರವನ್ನ ಕೇಳಲಿ. ಕುರುಬ ಸಮುದಾಯವನ್ನ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು, RSS ಹಾಗೂ ಈಶ್ವರಪ್ಪರ ಕುತಂತ್ರ. ಬಿಜೆಪಿಯ ಸರ್ಕಾರವಿದೆ, ಈಶ್ವರಪ್ಪ ಹೋರಾಟ ಮಾಡೋದು ಬಿಟ್ಟು ಮೀಸಲಾತಿ ಕೊಡಿಸಲಿ ಎಂದು ಸಿದ್ದರಾಮಯ್ಯ ಹೇಳಿದರು.

‘ವ್ಯಾಕ್ಸಿನ್​​ ತಗೋಬೇಕಂದ್ರೆ ವೈಜ್ಞಾನಿಕವಾಗಿ ಸಾಬೀತಾಗಬೇಕು’ ವ್ಯಾಕ್ಸಿನ್​​ ತಗೋಬೇಕಂದ್ರೆ ವೈಜ್ಞಾನಿಕವಾಗಿ ಸಾಬೀತಾಗಬೇಕು. ಅದು ಶೇಕಡಾ 80ಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿರಬೇಕು. ಆ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ತಜ್ಞ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಆ ಬಗ್ಗೆ ತಿಳಿದುಕೊಂಡು ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.

ರಾಮ ಆದರ್ಶ ವ್ಯಕ್ತಿ; ಆದರೆ, ಪ್ರಧಾನಿ ಮೋದಿ ರಾಮನಲ್ಲ.. ಕೃಷ್ಣ -S.L.ಭೈರಪ್ಪ

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ