AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಸತೀಶ್​ ಜಾರಕಿಹೊಳಿ ಹೆಸರೇ ಬಹುತೇಕ ಫೈನಲ್​ ಎಂದ ಸಿದ್ದರಾಮಯ್ಯ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಸತೀಶ್ ಜಾರಕಿಹೊಳಿ‌ ಹೆಸರನ್ನು ಶಿಫಾರಸು ಮಾಡಿದ್ದೇವೆ. ಬಹುತೇಕ ಸತೀಶ್​ ಜಾರಕಿಹೊಳಿ ಹೆಸರೇ ಅಂತಿಮವಾಗಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಸತೀಶ್​ ಜಾರಕಿಹೊಳಿ ಹೆಸರೇ ಬಹುತೇಕ ಫೈನಲ್​ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
KUSHAL V
|

Updated on: Mar 20, 2021 | 6:45 PM

Share

ಮೈಸೂರು: ಮತಗಳೇನು ಬಿ.ಎಸ್​​.ಯಡಿಯೂರಪ್ಪನ ಜೇಬಿನಲ್ಲಿದ್ದಾವಾ? ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಇದು ಕಾಂಗ್ರೆಸ್​ಗೆ ಅನುಕೂಲವಾಗಿದೆ ಎಂದು ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂಬ ಸಿಎಂ BSY ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರದಲ್ಲಿ‌ ಮುಳುಗಿದೆ. ಜನ ಉತ್ತರಿಸಲಿದ್ದಾರೆ. ಏ.17ರಂದು ಜನರು ಉತ್ತರ ನೀಡಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಉಪಚುನಾವಣೆಗೆ ಕಾಂಗ್ರೆಸ್ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಪ್ರತಾಪಗೌಡ ಪಾಟೀಲ್​ ಕಾಂಗ್ರೆಸ್​​​ ಬಿಟ್ಟು ಹೋಗಿದ್ದಾನೆ. ಅವರಿಗೆ ನೈತಿಕತೆ ಇಲ್ಲ. ಇದೆಲ್ಲವೂ ಮುನ್ನೆಲೆಗೆ ಬರುತ್ತದೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಸತೀಶ್ ಜಾರಕಿಹೊಳಿ‌ ಹೆಸರನ್ನು ಶಿಫಾರಸು ಮಾಡಿದ್ದೇವೆ. ಬಹುತೇಕ ಸತೀಶ್​ ಜಾರಕಿಹೊಳಿ ಹೆಸರೇ ಅಂತಿಮವಾಗಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

‘ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನು ಬಿಜೆಪಿಗೆ ಹೋಗಿದ್ದಾನೆ’ ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯವೆಂಬ ಬಿಜೆಪಿ MLC ವಿಶ್ವನಾಥ್​ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್​ ಕೊಟ್ಟಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನು ಬಿಜೆಪಿಗೆ ಹೋಗಿದ್ದಾನೆ. ಇಂಥವರಿಗೆ ಹೊಂದಾಣಿಕೆ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಅಂಥವರ ಮಾತಿಗೆ ನಾನು ಉತ್ತರ ನೀಡುವ ಅಗತ್ಯವೇ ಇಲ್ಲ ಎಂದು ವಿಶ್ವನಾಥ್​ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು. ಇನ್ನು, ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಸೋಮವಾರ ವಿಧಾನಸಭೆಯಲ್ಲಿ ಸಿಡಿ ವಿಚಾರ ಪ್ರಸ್ತಾಪಿಸ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

‘ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ’ ಇನ್ನು, ಈ ಹಿಂದೆ ಮಾತನಾಡಿದ್ದ ಬಿಜೆಪಿ ಎಂಎಲ್‌ಸಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್​ ತಮ್ಮ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.  ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ. ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ, ಕುಮಾರಸ್ವಾಮಿರವನ್ನ ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ, ಇಬ್ಬರೂ ಸೇರಿ ಯಡಿಯೂರಪ್ಪರನ್ನ ರಕ್ಷಿಸುತ್ತಿದ್ದಾರೆ. ಇದು ಒಬ್ಬೊರಿಗೊಬ್ಬರು ಅಡ್ಜಸ್ಟ್​ಮೆಂಟ್ ರಾಜಕಾರಣ. ಇದರಲ್ಲಿ ಯಡಿಯೂರಪ್ಪ ನ್ಯಾಷನಲ್ ಗೌರ್ನ್​ಮೆಂಟ್ ಚೀಫ್ ಮಿನಿಸ್ಟರ್. ಅವರು ಬುದ್ದಿ ಚಾತುರ್ಯದಿಂದ ಎಲ್ಲರನ್ನು ಅಡ್ಜಸ್ಟ್​ ಮಾಡಿಕೊಂಡಿದ್ದಾರೆ. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಅಡ್ಜಸ್ಟ್​ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಇವರದ್ದೆಲ್ಲಾ ಅಡ್ಜಸ್ಟ್​ಮೆಂಟ್ ರಾಜಕಾರಣ. ಭ್ರಷ್ಟಾಚಾರದಲ್ಲೂ ಅಷ್ಟೇ ಈಗಿನ ಸಿಡಿಯಲ್ಲೂ ಅಷ್ಟೇ. ಸಿದ್ದರಾಮಯ್ಯ ಅವರ ಅರ್ಕಾವತಿ ಪ್ರಕರಣ ಮುಚ್ಚಿ ಹಾಕುವುದಕ್ಕೆ, ಕುಮಾರಸ್ವಾಮಿ ಪೋನ್ ಕದ್ದಾಲಿಕೆ ಮುಚ್ಚಿಕೊಳ್ಳಲು ಅಡ್ಜಸ್ಟ್​ಮೆಂಟ್​ ನಡೆದಿದೆ. ನಾವು ಯಾವ ಪುರುಷಾರ್ಥಕ್ಕೆ ದಂಗೆ ಎದ್ದು ಸರ್ಕಾರ ಬೀಳಿಸಿದೆವೋ ಅಂತ ಈಗ ಅನ್ನಿಸುತ್ತಿದೆ ಎನ್ನುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು.

ಇತ್ತ ಸಿದ್ದರಾಮಯ್ಯ ಅವರ ಭ್ರಷ್ಟಾಚಾರಕ್ಕೆ ಲಸಿಕೆ ಯಾವಾಗ? ಎಂಬ ಟ್ವೀಟ್​ಗೆ ತಿರುಗೇಟು ನೀಡಿರುವ ಹೆಚ್.ವಿಶ್ವನಾಥ್​, ಇದ್ದ ಲೋಕಾಯುಕ್ತ ಎಂಬ ಲಸಿಕೆಯನ್ನು ನಾಶ ಮಾಡಿದವರು ಯಾರು ಸಿದ್ದರಾಮಯ್ಯ? ನಿಮ್ಮ ಅರ್ಕಾವತಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತದ ಬಾಗಿಲು ಹಾಕಿದ್ರಿ. ಜನರನ್ನು ಏನು ದಡ್ಡರು ಎಂದುಕೊಂಡಿದ್ದೀರಾ ಎಂದು ಕಿಡಿಕಾರಿದ್ದರು.

ಅಲ್ಲದೇ ಕಾಂಗ್ರೆಸ್​ನ ಸಿದ್ದರಾಮಯ್ಯ ಮತ್ತು ತಂಡದವರನ್ನು ಬ್ರಿಟೀಷರಿಗೆ ಹೋಲಿಸಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಬ್ರಿಟಿಷರು ಹೇಗೆ ಭಾರತಕ್ಕೆ ಬಂದು ಭಾರತಿಯರನ್ನೇ ಓಡಾಡಿಸಿದ್ರೋ ಹಾಗೆಯೇ ಸಿದ್ದರಾಮಯ್ಯ ಮತ್ತು ಗ್ಯಾಂಗ್ ಮೂಲ ಕಾಂಗ್ರೆಸಿಗರನ್ನು ಓಡಾಡಿಸುತ್ತಿದೆ. ವಲಸಿಗರೆಲ್ಲ ಸೇರಿ ಮೂಲ ಕಾಂಗ್ರೆಸಿಗರನ್ನ ಮುಗಿಸುತ್ತಿದ್ದಾರೆ. ರೋಷನ್ ಬೇಗ್ ಆದಿಯಾಗಿ ಅಲ್ಪಸಂಖ್ಯಾತರನ್ನು ತುಳಿದರು. ಸಿದ್ದರಾಮಯ್ಯರನ್ನ ಯಾರು ಪ್ರಶ್ನೆ ಮಾಡುವಂತಿಲ್ಲ. ಮೈಸೂರು ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ನೋಡಿದರೆ ಇವರು ಕಾಂಗ್ರೆಸನ್ನೇ ಮುಗಿಸುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದರು.

ಇದನ್ನೂ ಓದಿ: ಕಂಠಪೂರ್ತಿ ಕುಡಿದು ಹಣ ಕೊಡಲ್ಲ ಅಂದಿದ್ದಕ್ಕೆ ಬಿತ್ತು ಸಿಕ್ಕಾಪಟ್ಟೆ ಗೂಸಾ.. ಬಾರ್ ಕ್ಯಾಶಿಯರ್​ನಿಂದ ಹಲ್ಲೆ ಖಂಡಿಸಿ ಧರಣಿ

Follow Us
KUSHAL V
KUSHAL V
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!