ಬೆಂಗಳೂರಿನ ಆಸ್ಪತ್ರೆಗಳಲ್ಲಿ ಶುರುವಾಗಿದೆ ಆಕ್ಸಿಜನ್ ಸರಬರಾಜು ಸಮಸ್ಯೆ
ಬೆಂಗಳೂರು:ಆಕ್ಸಿಜನ್ ಪೂರೈಕೆ ಮಾಡುವ ಕಂಪನಿಗಳಲ್ಲಿ ತಾಂತ್ರಿಕ ತೊಂದರೆ ಉಂಟಾಗಿರುವುದರಿಂದ, ಬೆಂಗಳೂರಿನ ಬಹುತೇಕ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಬೇಕಾದ ಆಕ್ಸಿಜನ್ ವ್ಯವಸ್ಥೆ ಮಾಡುವಲ್ಲಿ ವಿಫಲವಾಗುತ್ತಿವೆ. Hospital Oxygen Gas Cylinder shortage ರಾಜ್ಯದಲ್ಲಿ ಆಕ್ಸಿಜನ್ ತಯಾರಿಕಾ ಕಂಪನಿಗಳ ಸಂಖ್ಯೆ ತೀರಾ ಕಡಿಮೆ ಇದ್ದು, ಈಗಾಗಲೇ ಇರುವ ಕಂಪನಿಗಳು ಸಹ ಅವಶ್ಯಕತೆಗೆ ತಕ್ಕಷ್ಟು ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿಲ್ಲ. ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಅವಶ್ಯಕತೆ […]

ಬೆಂಗಳೂರು:ಆಕ್ಸಿಜನ್ ಪೂರೈಕೆ ಮಾಡುವ ಕಂಪನಿಗಳಲ್ಲಿ ತಾಂತ್ರಿಕ ತೊಂದರೆ ಉಂಟಾಗಿರುವುದರಿಂದ, ಬೆಂಗಳೂರಿನ ಬಹುತೇಕ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಬೇಕಾದ ಆಕ್ಸಿಜನ್ ವ್ಯವಸ್ಥೆ ಮಾಡುವಲ್ಲಿ ವಿಫಲವಾಗುತ್ತಿವೆ.
Hospital Oxygen Gas Cylinder shortage ರಾಜ್ಯದಲ್ಲಿ ಆಕ್ಸಿಜನ್ ತಯಾರಿಕಾ ಕಂಪನಿಗಳ ಸಂಖ್ಯೆ ತೀರಾ ಕಡಿಮೆ ಇದ್ದು, ಈಗಾಗಲೇ ಇರುವ ಕಂಪನಿಗಳು ಸಹ ಅವಶ್ಯಕತೆಗೆ ತಕ್ಕಷ್ಟು ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿಲ್ಲ. ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಅವಶ್ಯಕತೆ ಹೆಚ್ಚಾಗಿದ್ದು, ಈಗ ಆಸ್ಪತ್ರೆಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.
ಬೆಂಗಳೂರಿನ 16 ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು, ತಾತ್ಕಾಲಿಕವಾಗಿ ಬೇರೆ ಕಡೆಯಿಂದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 16 ಖಾಸಗಿ ಆಸ್ಪತ್ರೆಗಳಲ್ಲಿ 1000 ಬೆಡ್ಗಳಿದ್ದು, ಆಕ್ಸಿಜನ್ ಕೊರತೆ ಉಂಟಾದರೆ ದೊಡ್ಡ ಗಂಡಾಂತರ ಎದುರಾಗಲಿದೆ.
ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದಿದ್ದು, ಆಕ್ಸಿಜನ್ ಆಕ್ಸಿಜನ್ ಪೂರೈಕೆ ಮಾಡುವ ಕಂಪನಿಗಳು ಆಸ್ಪತ್ರೆಗಳಿಗೆ ಅವಶ್ಯಕತೆ ಇರುವಷ್ಟು ಆಕ್ಸಿಜನ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಜೊತೆಗೆ ಆಕ್ಸಿಜನ್ ದರವನ್ನು ಹೆಚ್ಚಳ ಮಾಡಿವೆ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಗಳ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸಮಿತಿ ಸದಸ್ಯ ಡಾ. ಹೆಚ್ .ಎಂ. ಪ್ರಸನ್ನ ಟಿವಿ9ಗೆ ತಿಳಿಸಿದ್ದಾರೆ.
Published On - 11:21 am, Fri, 21 August 20