ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಅರೆಸ್ಟ್​

| Updated By:

Updated on: Jun 07, 2020 | 4:18 PM

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಂಟೇನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಹೀಗಿದ್ದರೂ ಕಾರ್ಪೊರೇಟರ್ ಇಮ್ರಾನ್ ಪಾಷಾ ಮೆರವಣಿಗೆ ಮಾಡಿರುವುದು ಶುದ್ಧತಪ್ಪು. ಇದು ಕ್ರಿಮಿನಲ್ ಅಪರಾಧ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಕಾರ್ಪೊರೇಟರ್ ಇಮ್ರಾನ್ ಪಾಷಾನನ್ನ ಬಂಧಿಸಲಾಗಿದೆ. ಇಮ್ರಾನ್ ಪಾಷಾ ವಿರುದ್ಧ ಮತ್ತೊಂದು FIR ಹಾಕುತ್ತೇವೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರ ಲೋಪವಿದ್ದರೆ ಪೊಲೀಸರ ವಿರುದ್ಧವೂ ಕ್ರಮ ಜರುಗಿಸುತ್ತೇವೆ. ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದೇವೆ. ಯಾರೂ […]

ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಅರೆಸ್ಟ್​
Follow us on

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಂಟೇನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಹೀಗಿದ್ದರೂ ಕಾರ್ಪೊರೇಟರ್ ಇಮ್ರಾನ್ ಪಾಷಾ ಮೆರವಣಿಗೆ ಮಾಡಿರುವುದು ಶುದ್ಧತಪ್ಪು. ಇದು ಕ್ರಿಮಿನಲ್ ಅಪರಾಧ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಕಾರ್ಪೊರೇಟರ್ ಇಮ್ರಾನ್ ಪಾಷಾನನ್ನ ಬಂಧಿಸಲಾಗಿದೆ. ಇಮ್ರಾನ್ ಪಾಷಾ ವಿರುದ್ಧ ಮತ್ತೊಂದು FIR ಹಾಕುತ್ತೇವೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರ ಲೋಪವಿದ್ದರೆ ಪೊಲೀಸರ ವಿರುದ್ಧವೂ ಕ್ರಮ ಜರುಗಿಸುತ್ತೇವೆ.

ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದೇವೆ. ಯಾರೂ ಗುಂಪು ಸೇರುವಂತಿಲ್ಲ. ಮನೆಯಿಂದ ಹೊರಗೆ ಬರುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇದೇ ವೇಳೆ ಜೆ.ಜೆ.ನಗರ ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದ ಇಮ್ರಾನ್ ಪಾಷಾ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಎಲ್ಲಾ ಕ್ಲಿಯರ್ ಆಗಬೇಕು ಎಂದು ಬೆಂಬಲಿಗರನ್ನು ಚದುರಿಸಲು ಭಾಸ್ಕರ್ ರಾವ್ ಸೂಚಿಸಿದ್ದಾರೆ.