ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.
ಇದರಿಂದ ಕೋಪಗೊಂಡ ಗಗನ್ ನನಗೆ ಸಿಗದಿರುವ ಹುಡಗಿ ಯಾರಿಗೂ ಸಿಗಬಾರದು ಎಂದು ತೀರ್ಮಾನಿಸಿ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.