‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ […]

‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’

Updated on: Oct 10, 2020 | 2:20 PM

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಕೊಟ್ಟಿದ್ದಾರೆ.

ಪಂಚಮಶಾಲಿ ಸಮುದಾಯದ ಶೇಕಡಾ 70%ರಷ್ಟು ಜನ ಬಿಜೆಪಿಯ‌ನ್ನ ಬೆಂಬಲಿಸಿಕೊಂಡು ಬರ್ತಿದ್ದಾರೆ. ಸಚಿವ ಸ್ಥಾನ‌ ಕೇಳುವುದಕ್ಕಿಂತ ಮುನ್ನ ನಮಗೆ ಸಿಎಂ ಸ್ಥಾನವನ್ನೇ ಕೊಡಲಿ. ಮಹೇಶ್ ಕುಮಟಹಳ್ಳಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಆಗ ಕೊಡದಿದ್ದು ನಮಗೆ ಅಸಮಾಧಾನ ಇದೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಮೂವರು ಶಾಸಕರನ್ನಾದ್ರೂ‌ ಸಚಿವರನ್ನಾಗಿ ಮಾಡಬೇಕಿತ್ತು, ಮಾಡಲಿಲ್ಲ. ಯಡಿಯೂರಪ್ಪ ಅವರ ಅವಧಿ ಮೂರು ವರ್ಷ ಇರುತ್ತೋ ಇಲ್ಲ, ಮುಂದೆಯೂ ಅವರೇ ಸಿಎಂ ಆಗ್ತಾರೋ ಗೊತ್ತಿಲ್ಲ. ಅವರ ಅವಧಿ ಮುಗಿದ ಬಳಿಕ ನಮ್ಮ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ಕೊಡಿ ಅಂತಾ ಒತ್ತಾಯ ಮಾಡ್ತೇವೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.