ಲಾಕ್‌ಡೌನ್ ಮಧ್ಯೆಯೂ ಜಾತ್ರೆಗೆ ಅನುಮತಿ ನೀಡಿದ್ದ ಅಧಿಕಾರಿ ಮನೆಗೆ

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣೆಗೆಯಾಗಿದೆ. ಕೊಳಗೊಂಡನಹಳ್ಳಿಯಲ್ಲಿ ನಡೆದ ಜಾತ್ರೆಗೆ ಅಲ್ಲಿನ ಜನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್‌.ಸಿ ಕಲ್ಮತ್ ಅವರ ಬಳಿ ಅನುಮತಿ ಪಡೆದಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅತಿ ಹೆಚ್ಚು ಜನ ಸೇರಲು ಹಾಗೂ ಜಾತ್ರೆ ನಡೆಸಲು ಅನುಮತಿ ನೀಡಿದ್ದಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತಹಶೀಲ್ದಾರ್ ಅವರ ವರದಿಯ […]

ಲಾಕ್‌ಡೌನ್ ಮಧ್ಯೆಯೂ ಜಾತ್ರೆಗೆ ಅನುಮತಿ ನೀಡಿದ್ದ ಅಧಿಕಾರಿ ಮನೆಗೆ
ಸಾಧು ಶ್ರೀನಾಥ್​

Updated on: May 15, 2020 | 11:09 AM

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣೆಗೆಯಾಗಿದೆ.

ಕೊಳಗೊಂಡನಹಳ್ಳಿಯಲ್ಲಿ ನಡೆದ ಜಾತ್ರೆಗೆ ಅಲ್ಲಿನ ಜನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್‌.ಸಿ ಕಲ್ಮತ್ ಅವರ ಬಳಿ ಅನುಮತಿ ಪಡೆದಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅತಿ ಹೆಚ್ಚು ಜನ ಸೇರಲು ಹಾಗೂ ಜಾತ್ರೆ ನಡೆಸಲು ಅನುಮತಿ ನೀಡಿದ್ದಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತಹಶೀಲ್ದಾರ್ ಅವರ ವರದಿಯ ಹಿನ್ನೆಲೆಯಲ್ಲಿ ರಾಮನಗರ ಉಪ ಆಯುಕ್ತರು ಎನ್‌.ಸಿ ಕಲ್ಮತ್ ಅವರನ್ನು ಅಮಾನತುಗೊಳಿಸಿದ್ದಾರೆ.

 

Published On - 10:12 am, Fri, 15 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us