AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಯಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪನಮನ, ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಬೆಂಗಳೂರು: ಇಂದು ಮಕ್ಕಳ ಮಮತೆಯ ಚಾಚಾ ಪಂಡಿತ್ ಜವಾಹರ್ ಲಾಲ್ ನೆಹರು‌ ಜನ್ಮದಿನ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಆಚರಣೆ ಮಾಡಲಾಯಿತು. ನೆಹರು ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಪುಷ್ಪನಮನ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, K.H.ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, H.ಆಂಜನೇಯ, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ರು. ನೆಹರು ಐಡಿಯಾಲಜಿಯನ್ನು ನಾಶ ಮಾಡಲು ಹೊರಟಿದ್ದಾರೆ: ಈ ವೇಳೆ […]

KPCC ಯಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪನಮನ, ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಆಯೇಷಾ ಬಾನು
|

Updated on:Nov 14, 2020 | 2:36 PM

Share

ಬೆಂಗಳೂರು: ಇಂದು ಮಕ್ಕಳ ಮಮತೆಯ ಚಾಚಾ ಪಂಡಿತ್ ಜವಾಹರ್ ಲಾಲ್ ನೆಹರು‌ ಜನ್ಮದಿನ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಆಚರಣೆ ಮಾಡಲಾಯಿತು. ನೆಹರು ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಪುಷ್ಪನಮನ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, K.H.ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, H.ಆಂಜನೇಯ, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ರು.

ನೆಹರು ಐಡಿಯಾಲಜಿಯನ್ನು ನಾಶ ಮಾಡಲು ಹೊರಟಿದ್ದಾರೆ: ಈ ವೇಳೆ ಮಾತನಾಡಿದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ RSS ಐಡಿಯಾಲಜಿ ಮೇಲೆ ಮೋದಿ ಸರ್ಕಾರ ನಡೆಯುತ್ತಿದೆ. ಹಾಗು ನೆಹರು ಐಡಿಯಾಲಜಿಯನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಸರ್ಕಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. ನೆಹರು ಹೆಸರು ನೆನಪಿನಲ್ಲಿರದಂತೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ನೆಹರು ಮಾಡಿರುವ ಅಭಿವೃದ್ಧಿಗಳು ಜನರಿಗೆ ಗೊತ್ತಾಗುತ್ತದೆ.

ಹೀಗಾಗಿ ನೆಹರು ಹೆಸರನ್ನು ಕೆಡಿಸೋದಕ್ಕೆ ಹೊರಟಿದ್ದಾರೆ. ಸುಳ್ಳನ್ನ ಬರೆದು ಪ್ರಚಾರ ಮಾಡುತ್ತಿದ್ದಾರೆ. ನೆಹರು ತತ್ವಗಳು ಮುಗಿಸದೆ ಹೋದರೆ ಅವರಿಗೆ ನಷ್ಟ. ಅದಕ್ಕೆ ಸಾಕಷ್ಟು ಪ್ರಯತ್ನಗಳನ್ನ ಮಾಡುತ್ತಲೇ ಇದ್ದಾರೆ. ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸುತ್ತಿದ್ದಾರೆ. ಅವರೊಬ್ಬ ಸಂತ, ಪ್ರತಿಮೆಯನ್ನು ಕೂರಿಸಲಿ ಸಂತೋಷ ಆದರೆ ನೆಹರು ವಿವಿಯಲ್ಲೂ ಪ್ರತಿಮೆ ಮಾಡಿದ್ದಾರೆ. ನೆಹರು ಮಾಡಿರುವ ಕೆಲಸಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Published On - 12:56 pm, Sat, 14 November 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು