ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು […]
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.
ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳೀಯ ಕಾರ್ಪೊರೇಟರ್ ಮಂಜುನಾಥ್ ರೆಡ್ಡಿ ಕೂಡ ಶಾಲೆಗೆ ಭೇಟಿ ನೀಡಿದ್ದಾರೆ.
Published On - 1:31 pm, Wed, 8 July 20