ಪರೇಶ್​​ ಮೇಸ್ತ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ : ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ

ಪರೇಶ್​​ ಮೇಸ್ತ ಸಾವು ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗ

ಪರೇಶ್​​ ಮೇಸ್ತ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ : ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ
ಪರಮೇಶ ಮೇಸ್ತ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 18, 2022 | 4:05 PM

ಉತ್ತರ ಕನ್ನಡ: ರಾಜ್ಯದಲ್ಲಿ ತೀರ್ವ ಸಂಚಲನ ಮೂಡಿಸಿದ್ದ ಪರೇಶ್​​ ಮೇಸ್ತ ಸಾವು ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಪರೇಶ್​​ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ಅಧಿಕಾರಿಗಳು ಇಂದು (ಅ.18) ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ವಿಸ್ತೃತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು  ಕೊಲೆ ಮಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ಉಲ್ಲೇಖಿಸಲಾಗಿದೆ.

ಈ ಹಿಂದೆ ಸಿಬಿಐ ಅಧಿಕಾರಿಗಳು ಅಕ್ಟೋಬರ್​ 3 ರಂದು ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ಮೊದಲ ವರದಿಯನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಪರೇಶ್​​ ಮೇಸ್ತ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ವರದಿ ಬಹಿರಂಗಗೊಂಡ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ತೀರ್ವ ಸಂಚಲನ ಮೂಡಿಸಿತ್ತು.

ಪರಮೇಶ ಮೇಸ್ತ ಸಾವಿನ ಹಿನ್ನೆಲೆ

ಡಿಸೆಂಬರ್ 6 2017 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರಮೇಶ ಮೇಸ್ತ ಕಾಣೆಯಾಗಿದ್ದನು. ಮುಂದೆ ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಡಿ.11ರಂದು ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿತ್ತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಪೊಲೀಸರು ಗಾಯಗೊಂಡರು, ವಾಹನಗಳು ಜಖಂಗೊಂಡಿದ್ದವು.

ಪ್ರಕರಣ ರಾಜಕೀಯ ರೂಪ ಪಡೆದುಕೊಂಡು ಬಿಜೆಪಿ ಘಟಾನುಘಟಿ ನಾಯಕರು ಬೀದಿಗೆ ಇಳಿದಿದ್ದರು. ಬಿಜೆಪಿ, ಅಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ದ ಆರೋಪ ಮಾಡಿತು. ಪರೇಶ್ ಮೇಸ್ತ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿತು. ರಾಜ್ಯಪಾಲರಿಗೂ ಈ ಕುರಿತು ದೂರು ಕೂಡ ನೀಡಿತ್ತು.

ಪರೇಶ್ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ. ಮೇಸ್ತ ಪೋಷಕರ ಒತ್ತಾಯದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಪ್ರಕರಣದಲ್ಲಿ ಐದು ಜನರನ್ನು ಬಂಧಿಸಲಾಗಿತ್ತು. ವಿಸೃತ ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪರಮೇಶ ಮೇಸ್ತಾ ತಂದೆ ಕಮಲಾಕರ್ ಮೇಸ್ತಾ ಅಸಮಾಧಾನ

ಸಿಬಿಐ ವರದಿಗೆ ತಂದೆ ಕಮಲಾಕರ್ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ನನ್ನ ಮಗನಿಗೆ ಈಜು ಗೊತ್ತಿತ್ತು, ಅವನು ಕೆರೆಯಲ್ಲಿ ಮುಳುಗಿ ಸಾಯಲು ಹೇಗೆ ಸಾಧ್ಯ.? ಘಟನೆ ವೇಳೆ ಸಮೀಪದಸಿ ಸಿಕ್ಯಾಮೆರಾಗಳು ಎಲ್ಲಿ ಹೋಯ್ತು ? ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 18 October 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ