ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಸೂಕ್ತ ಮಾಹಿತಿ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೆಜೆಸ್ಟಿಕ್‌ನ KSRTC ಬಸ್ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪಗೆ ತೆರಳಬೇಕಿದ್ದ ಮಹಿಳೆ ಕಣ್ಣೀರು ಹಾಕಿದ್ದಾರೆ. ತಂದೆ ನಿಧನರಾಗಿರುವ ಹಿನ್ನೆಲೆಯಲ್ಲಿ ಸಿರುಗುಪ್ಪಗೆ ತೆರಳಬೇಕಿತ್ತು. ಆದರೆ ಬಳ್ಳಾರಿಗೆ ಬಸ್ ಇಲ್ಲವೆಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ರಿಸರ್ವೇಶನ್ ಮಾಡಿಕೊಳ್ಳಲು ಹೇಳುತ್ತಿದ್ದಾರೆ. ಹೀಗಾಗಿ ತುಂಬ ಗೊಂದಲ ಉಂಟಾಗಿದೆ. ನಮ್ಮೂರಿಗೆ ಹೋಗಲು ಆಗುತ್ತೋ ಇಲ್ಲವೋ ಎಂದು ಮಹಿಳೆ ಕಣ್ಣೀರಿಟ್ಟಿರುವ […]
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಸೂಕ್ತ ಮಾಹಿತಿ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೆಜೆಸ್ಟಿಕ್‌ನ KSRTC ಬಸ್ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪಗೆ ತೆರಳಬೇಕಿದ್ದ ಮಹಿಳೆ ಕಣ್ಣೀರು ಹಾಕಿದ್ದಾರೆ.
ತಂದೆ ನಿಧನರಾಗಿರುವ ಹಿನ್ನೆಲೆಯಲ್ಲಿ ಸಿರುಗುಪ್ಪಗೆ ತೆರಳಬೇಕಿತ್ತು. ಆದರೆ ಬಳ್ಳಾರಿಗೆ ಬಸ್ ಇಲ್ಲವೆಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ರಿಸರ್ವೇಶನ್ ಮಾಡಿಕೊಳ್ಳಲು ಹೇಳುತ್ತಿದ್ದಾರೆ. ಹೀಗಾಗಿ ತುಂಬ ಗೊಂದಲ ಉಂಟಾಗಿದೆ. ನಮ್ಮೂರಿಗೆ ಹೋಗಲು ಆಗುತ್ತೋ ಇಲ್ಲವೋ ಎಂದು ಮಹಿಳೆ ಕಣ್ಣೀರಿಟ್ಟಿರುವ ಘಟನೆ ಮೆಜೆಸ್ಟಿಕ್‌ನಲ್ಲಿ ನಡೆದಿದೆ.