Peepal tree never wilts: ಅರಳಿ ಮರ ಎಂದಿಗೂ ಬಾಡುವುದಿಲ್ಲ, ಆ ವರ ಪಡೆಯಲು ಅರಳಿಮರ ಮಾಡಿದ್ದೇನು ಗೊತ್ತಾ? ಸೀತೆ ಕೊಟ್ಟ ವರವೇನು?

ಸೀತೆಯ ಶಾಪದಂತೆ ಫಲ್ಗುಣಿ ನದಿ ಬತ್ತಿಹೋಗಿದೆ. ನದಿಯೊಳಗಿನ ಮರಳನ್ನು ಅಗೆದಾಗಲಷ್ಟೇ ಇಂದಿಗೂ ನೀರು ಬರುತ್ತದೆ. ಫಲ್ಗುಣಿ ನದಿ ತೀರದಲ್ಲಿರುವ ಹಸುಗಳಿಗೆ ಪಿಂಡಗಳೇ ಆಹಾರ. ಅವು ಎಷ್ಟು ಹಸಿದಿರುತ್ತವೆ ಎಂದರೆ ಕೆಲವೊಮ್ಮೆ ಪಿಂಡ ವಿಸರ್ಜನೆಗೂ ಅವಕಾಶ ಕೊಡದೆ ಬಾಯಿ ಹಾಕುತ್ತದೆ. ನಂತರ ಸೀತೆಯ ದೃಷ್ಟಿ ಅರಳೀ ಮರದತ್ತ ಬೀಳುತ್ತದೆ. ಆಕೆ ಪರಮ ಸಂತೋಷದಿಂದ ಆಶೀರ್ವದಿಸುತ್ತಾಳೆ. ಅಂದಿನಿಂದ ಅರಳಿ ಮರ ಬಾಡದೆ ಸದಾ ನಳನಳಿಸುತ್ತಿದೆ.

Peepal tree never wilts: ಅರಳಿ ಮರ ಎಂದಿಗೂ ಬಾಡುವುದಿಲ್ಲ, ಆ ವರ ಪಡೆಯಲು ಅರಳಿಮರ ಮಾಡಿದ್ದೇನು ಗೊತ್ತಾ? ಸೀತೆ ಕೊಟ್ಟ ವರವೇನು?
ಅರಳಿ ಮರ ಎಂದಿಗೂ ಬಾಡುವುದಿಲ್ಲ, ಏಕೆ
Follow us
|

Updated on:Sep 19, 2024 | 8:39 AM

ರಾಮ ಲಕ್ಷ್ಮಣರು ವನವಾಸದಲ್ಲಿದ್ದಾಗ ಈಗಿನ ಬಿಹಾರದಲ್ಲಿರುವ ಗಯಾ ಕ್ಷೇತ್ರಕ್ಕೆ ಬರುತ್ತಾರೆ. ಸೀತಾದೇವಿಯನ್ನು ಫಲ್ಗುಣಿ ನದಿಯ ದಂಡೆಯಲ್ಲಿ ಕೂಡಿಸಿ ಅವರಿಬ್ಬರು ಕಾಡಿಗೆ ಹೋಗುತ್ತಾರೆ. ಇದಾದ ಸ್ವಲ್ಪ ಹೊತ್ತಿನಲ್ಲೇ ನದಿಯ ಒಳಗಿನಿಂದ ಕೈಯೊಂದು ಹೊರಗೆ ಬರುತ್ತದೆ. ಸೀತಾದೇವಿ ನನಗೆ ಹಸಿವೆಯಾಗುತ್ತಿದೆ ಎಂದಂತಾಗುತ್ತದೆ. ಪದೇ ಪದೇ ಆ ಧ್ವನಿ ಮರುಕಳಿಸುತ್ತದೆ. ಆ ಧ್ವನಿ ದಶರಥ ಮಹಾರಾಜರಂತೆ ಇರುತ್ತದೆ. ಸೀತೆಗೆ ಏನು ಮಾಡುವುದೆಂದೇ ತೋಚುವುದಿಲ್ಲ.

ಬೇರೆ ದಾರಿ ಇಲ್ಲದೇ ಮರಳಿನ ಉಂಡೆಯನ್ನು ಮಾಡಿ ಅದರಲ್ಲಿ ಅನ್ನವನ್ನು ಆವಾಹನೆ ಮಾಡಿ ನದಿಯಿಂದ ಮೇಲೆ ಬಂದ ಕೈಯೊಳಗೆ ಇಡುತ್ತಾಳೆ. ನಂತರ ತನ್ನ ಕರ್ತವ್ಯಕ್ಕೆ ಐದು ಸಾಕ್ಷಿಗಳನ್ನು ಆಧಾರವಾಗಿ ಇಟ್ಟುಕೊಳ್ಳುತ್ತಾಳೆ.

Also Read:   Pind Daan in Gaya- ಶ್ರೀರಾಮ ತನ್ನ ತಂದೆ ದಶರಥನಿಗೆ ಪಿಂಡದಾನ ಮಾಡಿದ ಸ್ಥಳ ಯಾವುದು? ಪಿತೃತೀರ್ಥ ಗಯಾದ ಸ್ಥಳ ಮಹಾತ್ಮೆ ಏನು?

ಸೀತೆ ನೀಡಿದ ಆಹಾರದಿಂದ ದಶರಥ ಸಂತುಷ್ಟನಾಗುತ್ತಾನೆ. ಹರಸಿ ಮರೆಯಾಗುತ್ತಾನೆ. ಇತ್ತ ರಾಮ ಲಕ್ಷ್ಮಣರು ಮರಳಿದಾಗ ಸೀತೆ ಅವರಿಗೆ ನಡೆದ ಸಂಗತಿಯೆಲ್ಲವನ್ನೂ ವಿವರಿಸುತ್ತಾಳೆ. ರಾಮ ಲಕ್ಷ್ಮಣರಿಗೆ ಮೊದಲಿಗೆ ಸೀತೆಯ ಮಾತಿನ ಮೇಲೆ ನಂಬಿಕೆ ಬರುವುದಿಲ್ಲ. ಆಗ ಸೀತೆ ತನ್ನ ಕೃತ್ಯಕ್ಕೆ ಫಲ್ಗುಣಿ ನದಿ, ತುಳಸೀ ಗಿಡ, ಹಸು, ಬ್ರಾಹ್ಮಣ ಮತ್ತು ಅರಳಿಮರವೇ ಸಾಕ್ಷಿ (Phalguni River, Tulsi Plant, Cow, Brahman and peepal tree) ಎನ್ನುತ್ತಾಳೆ. ಆದರೆ ಸೀತೆಯ ಸಹಾಯಕ್ಕೆ ಅರಳಿ ಮರದ ಹೊರತಾಗಿ ಮತ್ಯಾರು ಬರುವುದಿಲ್ಲ. ಅರಳೀ ಮರ ಸಾಕ್ಷ್ಯ ನುಡಿಯುತ್ತದೆ. ರಾಮ, ಲಕ್ಷ್ಮಣರು ಸೀತೆಯ ಕರ್ತವ್ಯ ಪ್ರಜ್ಞೆಯನ್ನು ಶ್ಲಾಘಿಸುತ್ತಾರೆ.

ಆದರೆ ಸೀತೆ ತನ್ನ ಮಾತಿಗೆ ವಿರುದ್ದವಾಗಿ ನಡೆದುಕೊಂಡ ಫಲ್ಗುಣಿ ನದಿ, ಹಸು, ಬ್ರಾಹ್ಮಣ ಮತ್ತು ತುಳಸಿ ಗಿಡಕ್ಕೆ ಶಾಪ ಕೊಡುತ್ತಾಳೆ. ಫಲ್ಗುಣಿ ನದಿಗೆ ಮಳೆಗಾಲದಲ್ಲೂ ಸಹ ನಿನ್ನ ಪಾತ್ರಕ್ಕೆ ಎಷ್ಟೇ ನೀರು ಬಂದರೂ ಬರಿದಾಗಲಿ. ನೀರು ನೆಲದ ಒಳಗೇ ಉಳಿದುಕೊಳ್ಳಲಿ. ಹೇ ವಿಪ್ರೋತ್ತಮ ನೀನು ಸತ್ಯ ಹೇಳದೇ ನನಗೆ ಮೋಸ ಮಾಡಿದೆ. ಹೀಗಾಗಿ ನೀನು ಈ ಕ್ಷೇತ್ರದಲ್ಲೇ ಇದ್ದು ಕ್ಷೇತ್ರಕ್ಕೆ ಬರುವ ಯಾತ್ರಿಕರನ್ನು ಪೀಡಿಸಿ ಅದರಿಂದ ಬಂದ ಲಾಭದಿಂದ ಜೀವನ ನಡೆಸು.

Also Read: ಹಬ್ಬ ಹರಿದಿನಗಳಲ್ಲಿ ರಂಗೋಲಿ ಮತ್ತು ತೋರಣ ಕಟ್ಟುವುದರ ಮಹತ್ವ

ಗೋಮಾತೆ ನೀನು ಜಗವ ಬೆಳಗಬೇಕಾದವಳು. ಆದರೆ ನೀನು ನನ್ನ ಮಾತು ಮೀರಿ ಲೋಭತನ ಮೆರೆದೆ. ಹಾಗಾಗಿ ಗಯಾ ಕ್ಷೇತ್ರದಲ್ಲೇ ಇದ್ದುಕೊಂಡು ಅವರಿವರು ಪಿಂಡವನ್ನು ತಿನ್ನುತ್ತಾ ಜೀವನ ಸಾಗಿಸು. ಎಷ್ಟು ತಿಂದರೂ ನಿನ್ನ ಹೊಟ್ಟೆ ತುಂಬದಿರಲಿ. ತುಳಸಿ ಮಾತೆ ನೀನು ಪವಿತ್ರಳಾದವಳು. ನೀನು ಸಹ ನನಗೆ ಹೀಗೆ ಮಾಡುತ್ತೀಯ ಎಂದುಕೊಂಡಿರಲಿಲ್ಲ. ಹಾಗಾಗಿ ನೀನು ಎಲ್ಲೆಂದರಲ್ಲಿ ಬೆಳೆಯುವಂತಾಗಲಿ.

ಸೀತೆಯ ಶಾಪದಂತೆ ಫಲ್ಗುಣಿ ನದಿ ಬತ್ತಿಹೋಗಿದೆ. ನದಿಯೊಳಗಿನ ಮರಳನ್ನು ಅಗೆದಾಗಲಷ್ಟೇ ಇಂದಿಗೂ ನೀರು ಬರುತ್ತದೆ. ಫಲ್ಗುಣಿ ನದಿ ತೀರದಲ್ಲಿರುವ ಹಸುಗಳಿಗೆ ಪಿಂಡಗಳೇ ಆಹಾರ. ಅವು ಎಷ್ಟು ಹಸಿದಿರುತ್ತವೆ ಎಂದರೆ ಕೆಲವೊಮ್ಮೆ ಪಿಂಡ ವಿಸರ್ಜನೆಗೂ ಅವಕಾಶ ಕೊಡದೆ ಬಾಯಿ ಹಾಕುತ್ತದೆ. ನಂತರ ಸೀತೆಯ ದೃಷ್ಟಿ ಅರಳೀ ಮರದತ್ತ ಬೀಳುತ್ತದೆ. ಆಕೆ ಪರಮ ಸಂತೋಷದಿಂದ ಆಶೀರ್ವದಿಸುತ್ತಾಳೆ. ಅಂದಿನಿಂದ ಅರಳಿ ಮರ ಬಾಡದೆ ಸದಾ ನಳನಳಿಸುತ್ತಿದೆ. (ಲೇಖನ: ನಾ ಶ್ರೀಧರ್, ನಿತ್ಯಸತ್ಯ)

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

Published On - 4:04 am, Thu, 19 September 24