AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ತ್‌ ಬುಲೆಟಿನ್ ಬಿಡುಗಡೆ, ಪೇಜಾವರ ಶ್ರೀಗಳ ಆರೋಗ್ಯ ಗಂಭೀರ, ಇಂದು BSY ಭೇಟಿ

ಉಡುಪಿ: ಉಸಿರಾಟದ ಸಮಸ್ಯೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರೋ ಪೇಜಾವರ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪೇಜಾವರ ಶ್ರೀಗಳ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಆದರೆ ವಿಶ್ವೇಶತೀರ್ಥ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ: ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಯ ಐಸಿಯುನಲ್ಲಿ ಪೇಜಾವರ ಶ್ರೀಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಶ್ರೀಗಳ […]

ಹೆಲ್ತ್‌ ಬುಲೆಟಿನ್ ಬಿಡುಗಡೆ, ಪೇಜಾವರ ಶ್ರೀಗಳ ಆರೋಗ್ಯ ಗಂಭೀರ, ಇಂದು BSY ಭೇಟಿ
ಸಾಧು ಶ್ರೀನಾಥ್​
|

Updated on:Dec 21, 2019 | 11:27 AM

Share

ಉಡುಪಿ: ಉಸಿರಾಟದ ಸಮಸ್ಯೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರೋ ಪೇಜಾವರ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪೇಜಾವರ ಶ್ರೀಗಳ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಆದರೆ ವಿಶ್ವೇಶತೀರ್ಥ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ: ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಯ ಐಸಿಯುನಲ್ಲಿ ಪೇಜಾವರ ಶ್ರೀಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಶ್ರೀಗಳ ಶ್ವಾಸಕೋಶದಲ್ಲಿ ಕಫ ತುಂಬಿಕೊಂಡಿದ್ದು, ವೆಂಟಿಲೇಟರ್‌ ಅಳವಡಿಸಿ ಌಂಟಿಬಯೋಟಿಕ್ ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಣಿಪಾಲ ಆಸ್ಪತ್ರೆಯ 6 ಜನ ನುರಿತ ವೈದ್ಯರ ತಂಡ ಶ್ರೀಪಾದರ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದೆ.

ಶ್ರೀಗಳ ಆರೋಗ್ಯದ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಮಾಹಿತಿ ಪಡೆದಿದ್ದಾರೆ. ಯಾವುದೇ ನೆರವು ಅಗತ್ಯವಿದ್ದಲ್ಲಿ ಶ್ರೀಗಳ ಆಪ್ತಕಾರ್ಯದರ್ಶಿಗೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇನ್ನು ಶ್ರೀಗಳನ್ನ ನೋಡಲು, ಅವರ ಆರೋಗ್ಯವನ್ನ ವಿಚಾರಿಸಲು ಗಣ್ಯರ ದಂಡೇ ಆಸ್ಪತ್ರೆಯತ್ತ ಹರಿದು ಬರ್ತಿದೆ. ಸಚಿವರಾದ ಕೆ.ಎಸ್. ಈಶ್ವರಪ್ಪ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನ ವಿಚಾರಿಸಲಿದ್ದಾರೆ.

ಮೋದಿಯಿಂದ ಆರೋಗ್ಯ ವಿಚಾರಣೆ, ಬರ್ತಾರಾ ಶಾ..? ಯೆಸ್, ಕೆಎಂಸಿ ಆಸ್ಪತ್ರೆಗೆ ದಾಖಲಾಗಿರೋ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯವನ್ನ ಪ್ರಧಾನಿ ಮೋದಿ ವಿಚಾರಿಸಿದ್ದಾರೆ. ಶ್ರೀಗಳ ಆಪ್ತ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಶ್ರೀಪಾದರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಮೋದಿ, ಉಡುಪಿ ಭೇಟಿಯ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಉಡುಪಿಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆ ಭದ್ರತಾ ಪೂರ್ವ ತಯಾರಿಗೂ ಜಿಲ್ಲಾ ಪೊಲೀಸ್‌ ಸಿದ್ಧತೆ ನಡೆಸಿದೆ.

ಸುಳ್ಳು ಸುದ್ದಿ ಹರಡಿಸದಂತೆ ಪೊಲೀಸರ ವಾರ್ನಿಂಗ್..! ಇನ್ನು ಪೇಜಾವರ ಶ್ರೀಗಳ ಆರೋಗ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡದಂತೆ ಉಡುಪಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಆಸ್ಪತ್ರೆ ವೈದ್ಯರು ನೀಡಿದ ಹೆಳಿಕೆಯನ್ನ ಮಾತ್ರ ಪರಿಗಣಿಸುವಂತೆ ಕೋರಿದ್ದಾರೆ. ಒಟ್ನಲ್ಲಿ, ನಾಡು ಕಂಡ ಹಿರಿಯ ಯತಿ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

Published On - 8:00 am, Sat, 21 December 19