AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?

ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ. ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ… ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್​ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ಕಳೆದೊಂದು ವಾರದಿಂದ ಶೃಂಗೇರಿ ಜನ […]

ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?
ಆಯೇಷಾ ಬಾನು
|

Updated on:Aug 21, 2020 | 3:06 PM

Share

ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ.

ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ… ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್​ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ಕಳೆದೊಂದು ವಾರದಿಂದ ಶೃಂಗೇರಿ ಜನ ಬ್ಯಾನರ್ ಅಂದ್ರೆ ಬೆಚ್ಚಿ ಬೀಳ್ತಿದ್ದಾರೆ. ಶಂಕರಾಚಾರ್ಯರ ಪುತ್ಥಳಿ ಮೇಲೆ ಈದ್‍ ಮಿಲಾದ್ ಹಬ್ಬದಲ್ಲಿ ಶುಭ ಕೋರುವ ಬ್ಯಾನರ್ ಹಾಕಿದ್ದರಿಂದ ಶೃಂಗೇರಿಯಲ್ಲಿ ವಾದ-ವಿವಾದ ಪ್ರತಿಭಟನೆಗಳೇ ನಡೆದಿದ್ದವು.

ಅವ್ಯವಸ್ಥೆ ಖಂಡಿಸಿ ಬ್ಯಾನರ್ ಅಳವಡಿಕೆ: ನೋಡ-ನೋಡುತ್ತಿದ್ದಂತೆ ಶೃಂಗೇರಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದೀಗ, ಮತ್ತೆ ಬ್ಯಾನರ್ ಸುದ್ದಿ ಶಾರದಾಂಬೆ ಮಡಿಲಲ್ಲಿ ಸದ್ದು ಮಾಡುತ್ತಿದೆ. ಆದರೆ ಇದು ಯಾವುದೇ ವಾದ-ವಿವಾದಕ್ಕೆ ಆಸ್ಪದ ಕೊಡುವ ಬ್ಯಾನರ್ ಬಡಿದಾಟ ಅಲ್ಲ. ಬದಲಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧದ ಬ್ಯಾನರ್.

ಶೃಂಗೇರಿ ಪ್ರಸಿದ್ಧ, ಪುಣ್ಯ ಹಾಗೂ ಪ್ರವಾಸಿ ತಾಣ. ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಆದರೆ, ಇಂತಹ ಪ್ರವಾಸಿ ತಾಣದಲ್ಲಿ ಬಡಜನರ ಗೋಳನ್ನ ಕೇಳುವವರಿಲ್ಲದಂತಾಗಿದೆ.

ಸುಮಾರು 40-50 ಸಾವಿರಕ್ಕೂ ಅಧಿಕ ಜನಸಂಖ್ಯೆಯುಳ್ಳ ಶೃಂಗೇರಿಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ಸಣ್ಣ-ಪುಟ್ಟ ಜ್ವರ, ಶೀತದಂತಹ ಕಾಯಿಲೆ ಹೊರತುಪಡಿಸಿ ಇನ್ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಾಯಲ್ಲಿ ಬರೋದು ಒಂದೇ ಮಾತು. ಅದು ಇಲ್ಲಿ ಆಗಲ್ಲ. ಮಣಿಪಾಲ್‍ಗೆ ಹೋಗಿ ಅನ್ನೋದು.

ಇದರಿಂದ ಸ್ಥಳೀಯರು ರೋಸಿಹೋಗಿದ್ದು, ಯಾವ ಪುರುಷಾರ್ಥಕ್ಕೆ ಇಂತಹ ಆಸ್ಪತ್ರೆ ಅಂತ ಹಿಡಿಶಾಪ ಹಾಕುತ್ತಿದ್ದಾರೆ. ಯಾಕಂದ್ರೆ, ಈಗಿರುವ ಆಸ್ಪತ್ರೆಯಲ್ಲಿ ಯಾವುದೇ ಸುಸಜ್ಜಿತ ವ್ಯವಸ್ಥೆಯಾಗಲಿ, ಸೌಲಭ್ಯವಾಗಲಿ ಇಲ್ಲ. ಮಣಿಪಾಲ್ ಆಸ್ಪತ್ರೆ ಅಥವಾ ಉಡುಪಿಗೆ ಶೃಂಗೇರಿಯಿಂದ ಸುಮಾರು 100 ಕಿ.ಮೀ. ಇದೆ. ಅದು ಕೂಡ ಘಾಟಿಯ ರಸ್ತೆ. ತುರ್ತು ಸಂದರ್ಭದಲ್ಲಿ ಅಲ್ಲಿಗೆ ಹೋಗಲು ಎರಡರಿಂದ ಮೂರು ಗಂಟೆ ಬೇಕು. ಅಷ್ಟು ದೂರ ಹೋಗುವಾಗ ಮಾರ್ಗ ಮಧ್ಯೆ ಏನು ಬೇಕಾದ್ರು ಸಂಭವಿಸಬಹುದು. ಈಗಾಗಲೇ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರೋರು ಹಲವರಿದ್ದಾರೆ.

ಸುಸರ್ಜಿತ ಆಸ್ಪತ್ರೆಗಾಗಿ ಬ್ಯಾನರ್ ಟ್ರೋಲ್: ಈ ಮಧ್ಯೆಯೂ ಧೈರ್ಯ ಮಾಡಿ ಜೀವ ಉಳಿಸಿಕೊಳ್ಳಲೇ ಬೇಕು ಅಂತ ಹೋದವರು ಅಲ್ಲಿನ ಬಿಲ್ ನೋಡಿ ಜೀವ ಉಳಿದರೂ ಜೀವನವೇ ಹೋದಂತಾಗಿದೆ. ಸಾಲ ತೀರಿಸಲು ದುಡಿಯುತ್ತಲೇ ಇದ್ದಾರೆ. ಹಾಗಾಗಿ, ಶೃಂಗೇರಿಯ ತಾಲೂಕಿನ ಹಲವೆಡೆ ಜನರು ಈ ರೀತಿಯ ಬ್ಯಾನರ್ ಬರೆಸಿ ಹಾಕಿದ್ದಾರೆ.

ಕೆಲಸ ಮಾಡದ ಜನಪ್ರತಿನಿಧಿಗಳನ್ನು, ಸರ್ಕಾರವನ್ನ ಹೀಗೂ ಟ್ರೋಲ್ ಮಾಡಬಹುದು ಅನ್ನೋದನ್ನ ಶೃಂಗೇರಿ ಜನತೆ ತೋರಿಸಿಕೊಟ್ಟಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡದೇ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Published On - 2:57 pm, Fri, 21 August 20

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ