ಛೇ! ತುಂಬಿ ಹರಿಯುತ್ತಿರುವ ಹಳ್ಳದಲ್ಲೇ ಶವ ಸಾಗಿಸಿದರು: ಎಲ್ಲಿ, ಯಾಕೆ?

|

Updated on: Aug 11, 2020 | 11:56 AM

ವಿಜಯಪುರ: ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲು ತುಂಬಿ ಹರಿಯುತ್ತಿರುವ ಹಳ್ಳದಲ್ಲಿಯೇ ಮೃತದೇಹ ಹೊತ್ತೊಯ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಹೀಗಾಗಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಗ್ರಾಮದ ಜನರು ತುಂಬಿ ಹರಿಯುತ್ತಿರುವ ಹಳ್ಳ ದಾಟಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಮುಸ್ಲಿಂ ಸಮುದಾಯದ ಸ್ಮಶಾನ ಹಳ್ಳದ ಆಚೆ ಇದ್ದು, ಪ್ರತಿ ಮಳೆಗಾಲ ಬಂತೆಂದರೆ ಹಳ್ಳ ತುಂಬಿ ಹರಿಯುತ್ತದೆ. ಇದರಿಂದಾಗಿ ಮುಸ್ಲಿಂ ಸಮುದಾಯದ ಜನರು ಮೃತಪಟ್ಟರೆ ಅಂತ್ಯಸಂಸ್ಕಾರ […]

ಛೇ! ತುಂಬಿ ಹರಿಯುತ್ತಿರುವ ಹಳ್ಳದಲ್ಲೇ ಶವ ಸಾಗಿಸಿದರು: ಎಲ್ಲಿ, ಯಾಕೆ?
Follow us on

ವಿಜಯಪುರ: ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲು ತುಂಬಿ ಹರಿಯುತ್ತಿರುವ ಹಳ್ಳದಲ್ಲಿಯೇ ಮೃತದೇಹ ಹೊತ್ತೊಯ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಹೀಗಾಗಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಗ್ರಾಮದ ಜನರು ತುಂಬಿ ಹರಿಯುತ್ತಿರುವ ಹಳ್ಳ ದಾಟಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಸ್ಮಶಾನ ಹಳ್ಳದ ಆಚೆ ಇದ್ದು, ಪ್ರತಿ ಮಳೆಗಾಲ ಬಂತೆಂದರೆ ಹಳ್ಳ ತುಂಬಿ ಹರಿಯುತ್ತದೆ. ಇದರಿಂದಾಗಿ ಮುಸ್ಲಿಂ ಸಮುದಾಯದ ಜನರು ಮೃತಪಟ್ಟರೆ ಅಂತ್ಯಸಂಸ್ಕಾರ ಮಾಡಲು ಈ ರೀತಿಯ ಫಜೀತಿ ಪಡುವ ಸಮಸ್ಯೆ ಎದುರಾಗುತ್ತದೆ. ಇನ್ನಾದರೂ ಸರ್ಕಾರ ಹಳ್ಳಕ್ಕೆ ಸೇತುವೆ ಕಟ್ಟಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.