AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ: ಜನರ ಪರದಾಟ

ಹದಿನೈದು ಹಳ್ಳಿಗಳಿಗೆ ಆಧಾರ ಈ ಸರ್ಕಾರಿ ಆಸ್ಪತ್ರೆ. ರಟ್ಟೀಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವೆಂದರೆ ಕುಡುಪಲಿ ಸೇರಿದಂತೆ ಸುತ್ತಮುತ್ತಲಿನ ಹದಿನೈದು ಹಳ್ಳಿಗಳ ಜನರಿಗೆ ಆಧಾರವಾಗಿದೆ. ಒಂದು ಕೋಟಿ ಎಪ್ಪತ್ತು ಲಕ್ಷ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಸುಂದರ ಕಟ್ಟಡವಿದೆ.

ಹಾವೇರಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ: ಜನರ ಪರದಾಟ
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ
sandhya thejappa
| Edited By: |

Updated on: Mar 03, 2021 | 1:17 PM

Share

ಹಾವೇರಿ: ಸರಕಾರಿ ಆಸ್ಪತ್ರೆ ಎಂದರೆ ಸಾಕು ಅದನ್ನು ಬಡವರ ಪಾಲಿನ ಆಶಾಕಿರಣ ಎಂತಲೆ ಕರೆಯಲಾಗುತ್ತದೆ. ಆದರೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ಇದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಏನೂ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹದಿನೈದು ಹಳ್ಳಿಗಳಿಗೆ ಆಧಾರ ಈ ಸರ್ಕಾರಿ ಆಸ್ಪತ್ರೆ. ರಟ್ಟೀಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವೆಂದರೆ ಕುಡುಪಲಿ ಸೇರಿದಂತೆ ಸುತ್ತಮುತ್ತಲಿನ ಹದಿನೈದು ಹಳ್ಳಿಗಳ ಜನರಿಗೆ ಆಧಾರವಾಗಿದೆ. ಒಂದು ಕೋಟಿ ಎಪ್ಪತ್ತು ಲಕ್ಷ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಸುಂದರ ಕಟ್ಟಡವಿದೆ. ಕಟ್ಟಡ ಉದ್ಘಾಟನೆಯಾಗಿ ಮೂರು ತಿಂಗಳುಗಳು ಕಳೆದಿವೆ. ದಿನದ ಇಪ್ಪತ್ತು ನಾಲ್ಕು ಗಂಟೆ ಕೆಲಸ ನಿರ್ವಹಿಸಬೇಕಾದ ಆಸ್ಪತ್ರೆ ಇದಾಗಿದ್ದರೂ, ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಹದಿನೈದು ಹಳ್ಳಿಗಳ ಜನರ ಪಾಲಿಗೆ ಆಸ್ಪತ್ರೆ ಇದ್ದರೂ ಇಲ್ಲದಂತಾಗಿದೆ.

ಎಂಬಿಬಿಎಸ್ ವೈದ್ಯರೆ ಇಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡ ಕಟ್ಟಡ ಹೊಂದಿರುವ ಆಸ್ಪತ್ರೆಯಾಗಿದೆ. ಆದರೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಬಿಬಿಎಸ್ ವೈದ್ಯರಿಲ್ಲ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಸೇರಿ ಒಟ್ಟು ಹತ್ತೊಂಬತ್ತು ಜನರಿರಬೇಕು. ಆದರೆ ಸದ್ಯ ವೈದ್ಯರು ಮತ್ತು ಸಿಬ್ಬಂದಿ ಸೇರಿ ಒಟ್ಟು ಹನ್ನೊಂದು ಜನರಿದ್ದಾರೆ. ಅದರಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯವಾಗಿ ಇರಬೇಕಾದ ಎಂಬಿಬಿಎಸ್ ವೈದ್ಯರೆ ಇಲ್ಲ. ಹೀಗಾಗಿ ರೋಗಿಗಳಿಗೆ ಎಂಬಿಬಿಎಸ್ ವೈದ್ಯರ ಸೇವೆ ಸಿಗುತ್ತಿಲ್ಲ ಎಂಬ ಕೊರಗು ಕಾಡುತ್ತಿದೆ.

ಆಸ್ಪತ್ರೆ ಒಳಾಂಗಣ

ಆಸ್ಪತ್ರೆಗೆ ಆಗಮಿಸಿರುವ ವೃದ್ಧರು

ಸರಿಯಾಗಿ ಸಿಗದ ಚಿಕಿತ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿತ್ಯವೂ ಸುತ್ತಮುತ್ತಲಿನ ಗ್ರಾಮಗಳ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳು ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳು ಬಂದ ದಾರಿಯಲ್ಲಿ ವಾಪಸ್ ಆಗುವ ಪರಿಸ್ಥಿತಿ ಇದೆ. ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುವ ಇಬ್ಬರು ಬಿಎಎಂಎಸ್ ವೈದ್ಯರಿದ್ದಾರೆ. ಒಬ್ಬರು ಖಾಯಂ ಸ್ಟಾಪ್ ನರ್ಸ್, ಇಬ್ಬರು ಖಾಯಂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಇಬ್ಬರು ಗುತ್ತಿಗೆ ಆಧಾರಿತ ಮಹಿಳಾ ಆರೋಗ್ಯ ಸಹಾಯಕಿಯರು, ಇಬ್ಬರು ಖಾಯಂ ಪುರುಷ ಕಿರಿಯ ಆರೋಗ್ಯ ಸಹಾಯಕರು ಹಾಗೂ ಒಬ್ಬರು ಗುತ್ತಿಗೆ ಆಧಾರಿತ ಸ್ಟಾಪ್ ನರ್ಸ್ ಮತ್ತು ಒಬ್ಬರು ಖಾಯಂ ಡಿ ಗ್ರೋಪ್ ನೌಕರ ಇದ್ದಾರೆ. ಆದರೆ ಬೆರಳೆಣಿಕೆಯಷ್ಟು ಸಿಬ್ಬಂದಿ ಹೊರತುಪಡಿಸಿದರೆ ಬಹುತೇಕರು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರುತ್ತಿಲ್ಲ. ಹೀಗಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ.

ನಮ್ಮ ಗ್ರಾಮದಲ್ಲಿನ ಆಸ್ಪತ್ರೆಯಲ್ಲಿ ಎಂಬಿಬಿಎಸ್ ವೈದ್ಯರು ಸೇರಿದಂತೆ ಖಾಲಿ ಇರುವ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಆಸ್ಪತ್ರೆಗೆ ವೈದ್ಯರು ಮತ್ತು ಕೊರತೆ ಇರುವ ಸಿಬ್ಬಂದಿ ನೇಮಿಸಬೇಕು. ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಮತ್ತು ಸಿಬ್ಬಂದಿ ಬಂದು ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಇಲ್ಲದಿದ್ದರೆ ಆಸ್ಪತ್ರೆ ಇದ್ದರೂ ಇಲ್ಲದಂತಾಗುತ್ತದೆ ಎಂದು ಗ್ರಾಮಸ್ಥ ಶರಣಪ್ಪ ಎಂಬುವವರು ಆಗ್ರಹಿಸಿದ್ದಾರೆ.

ಕುಡುಪಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಆಸ್ಪತ್ರೆಗೆ ಎಂಬಿಬಿಎಸ್ ವೈದ್ಯರ ನೇಮಕ ಆಗಬೇಕಿದೆ. ಈಗ ಇರುವ ವೈದ್ಯರು ಮತ್ತು ಸಿಬ್ಬಂದಿಯಿಂದ ಜನರಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಝಡ್.ಆರ್.ಮಕಂದಾರ ತಿಳಿಸಿದ್ದಾರೆ.

ಇದನ್ನೂ ಓದಿ

ಕೊರೊನಾ ಹಿಮ್ಮೆಟ್ಟಿಸುವ ಪ್ರಯೋಗ ಮೊದಲು ಶುರುಮಾಡಿದ್ದೇ ಭಾರತೀಯ ವೈದ್ಯರು

ಗರ್ಭಿಣಿಯರ ಕಾಳಜಿಯಲ್ಲಿ ಮುಖ್ಯ ಪಾತ್ರ ವಹಿಸಿರುವ ಕೋಲಾರದ ದರ್ಗಾ ಮೊಹಲ್ಲಾದ ಸರ್ಕಾರಿ ಆಸ್ಪತ್ರೆ