AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಇಂದು ಪೆಟ್ರೋಲ್ ​32 ಪೈಸೆ ಏರಿಕೆ; ಆದರೆ ಸೆಸ್​ ವಾಪಸ್​ ತೆಗೆಯುವುದಿಲ್ಲ ಎಂದ ಸರ್ಕಾರ

Petrol Diesel Rate: ಇಂದು ನಗರದಲ್ಲಿ ಪ್ರತಿ ಲೀಟರ್​ಗೆ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆ ತಲಾ 32ಪೈಸೆ ಏರಿಕೆ ಮಾಡಲಾಗಿದೆ. ಏರಿಕೆ ಮಾಡಿದ ನಂತರ ದರ  ₹90.78 ಹಾಗೂ ಡೀಸೆಲ್ ಬೆಲೆ ಲೀಟರ್​ಗೆ ₹82.72 ಹೆಚ್ಚಳವಾಗಿದೆ.

Petrol Price: ಇಂದು ಪೆಟ್ರೋಲ್ ​32 ಪೈಸೆ ಏರಿಕೆ; ಆದರೆ ಸೆಸ್​ ವಾಪಸ್​ ತೆಗೆಯುವುದಿಲ್ಲ ಎಂದ ಸರ್ಕಾರ
ಸಾಂದರ್ಭಿಕ ಚಿತ್ರ
shruti hegde
| Updated By: Digi Tech Desk|

Updated on:Feb 12, 2021 | 9:14 AM

Share

ಬೆಂಗಳೂರು: ಸತತವಾಗಿ 3ನೇ ದಿನವೂ ಏರಿಕೆಯಾದ ಪೆಟ್ರೋಲ್​ ಡೀಸೆಲ್​ ದರ ಇಂದು ಪ್ರತಿ ಲೀಟರ್​ಗೆ ತಲಾ 32 ಪೈಸೆ ಏರಿಕೆ ಮಾಡಲಾಗಿದೆ. ಏರಿಕೆ ಮಾಡಿದ ಬಳಿಕ ಬೆಲೆ  ₹90.78 ಹೆಚ್ಚಳವಾಗಿದೆ. ಹಾಗೂ ಡೀಸೆಲ್ ಬೆಲೆ ಲೀಟರ್​ಗೆ ₹82.72 ಏರಿಕೆಯಾಗಿದೆ. ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್​​ ಮತ್ತು ಡೀಸೆಲ್​ ಬೆಲೆ ಗಣನೀಯವಾಗಿ ಏರುತ್ತಲೇ ಇದೆ. ಕೊರೊನಾ ಮಹಾಮಾರಿಯಿಂದಾಗಿ ದೇಶದಲ್ಲಿನ ಸಂಕಷ್ಟದ ನಂತರದಲ್ಲಿ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಹೆಚ್ಚಿಸಿದೆ. ಕಳೆದ ಮೂರು ದಿನಗಳಿಂದ ಪೆಟ್ರೋಲ್​ ಬೆಲೆ ಏರಿಕೆ ಮಟ್ಟವನ್ನು ಕಾಣುತ್ತಲೇ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 90ರ ಗಡಿ ದಾಟಿದ್ದರೂ ತೈಲ ಉತ್ಪನ್ನಗಳ ಅಬಕಾರಿ ಶುಲ್ಕ ಕಡಿತದ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ;  ಸೆಸ್​ ವಾಪಸ್​ ತೆಗೆಯುವುದಿಲ್ಲ ಎಂದು ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯ ಸಭೆಗೆ ನಿನ್ನೆ ತಿಳಿಸಿದ್ದಾರೆ.

ಇಂಧನ ಬೆಲೆ ಏರಿಕೆಗೆ ಜಾಗತಿಕವಾಗಿ ತೈಲ ಬೆಲೆ ಏರಿಕೆ ಒಂದಾದರೆ, ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿದ ತೆರಿಗೆಯಿಂದ ಇಂಧನ ಬೆಲೆ ಏರಿಕೆಯಾಗುವುದೂ ಒಂದು ಕಾರಣವಾಗಿದೆ. ಎರಡು ವಾರಗಳ ಹಿಂದೆಯಿಂದ ದೇಶದಲ್ಲಿ ಇಂಧನ ಬೆಲೆ ಏರಿಕೆಯತ್ತ ಮುಖಮಾಡಲು ಪ್ರಾರಂಭಿಸಿತು. ಕಳೆದ 15 ದಿನಗಳಲ್ಲಿ ಪೆಟ್ರೋಲ್​, ಡೀಸಲ್​ ಬೆಲೆ 2ರಿಂದ 3 ರೂ. ಏರಿಕೆಯಾಗಿದೆ.

Explainer: ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಲೇ ಇದೆ! ಯಾಕೆ?

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಲಾಕ್​ಡೌನ್​ ಪರಿಣಾಮವಾಗಿ ತೈಲ ಬೆಲೆ ಏರಿಕೆ ಪರಿಣಾಮ ಬಳಕೆದಾರರ ಮೇಲೆ ಆಗಿರಲಿಲ್ಲ. ಜಾಗತಿಕ ಕಚ್ಚಾ ತೈಲದ ಬೆಲೆಯಲ್ಲಿ ವ್ಯತ್ಯಾಸವಾದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಜಾಗತಿಕವಾಗಿ ಸುಧಾರಿಸಿಕೊಂಡ ಬಳಿಕ ಇಂಧನ ಬೆಲೆ ಹೆಚ್ಚುತ್ತಿದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್​ ಬೆಲೆಯ ಮಾಹಿತಿ ಪ್ರಸ್ತುತದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ, ನಾಲ್ಕು ಮೆಟ್ರೋ ನಗರಗಳಾದ ದೆಹಲಿಯಲ್ಲಿ ₹87.85 ಮತ್ತು ಡೀಸೆಲ್ ಬೆಲೆ ₹78.03, ಚೆನ್ನೈನಲ್ಲಿ ₹90.18 ಮತ್ತು ಡೀಸೆಲ್ ₹83.18, ಕೊಲ್ಕತ್ತದಲ್ಲಿ ₹89.16 ಮತ್ತು ಡೀಸೆಲ್ ₹81.61 ಹಾಗೂ ಮುಂಬೈನಲ್ಲಿ ಪೆಟ್ರೋಲ್​ ದರ  ₹94.36 ಹಾಗೂ 84.94 ದರವಿದೆ ಎಂದು ಎಎನ್​ಐ ವರದಿ ಮಾಡಿದೆ.

Published On - 10:20 am, Thu, 11 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ