Petrol Diesel Price | ಪೆಟ್ರೋಲ್​, ಡೀಸೆಲ್ ದರದಲ್ಲಿ ಸ್ಥಿರತೆ.. ಇಂಧನ ದರ ಇಳಿಕೆಯತ್ತ ಮುಖ ಮಾಡುವುದು ಯಾವಾಗ?

Petrol Diesel Rate: ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ. ಪೆಟ್ರೋಲ್​, ಡೀಸೆಲ್​ ದರ ಎಷ್ಟಕ್ಕೆ ಮಾರಾಟವಾಗುತ್ತಿದೆ? ಭಾರತದ ವಿವಿಧ ನಗರಗಳಲ್ಲಿ ದರ ಹೇಗಿದೆ? ಎಂಬುದರ ಮಾಹಿತಿ ಇಲ್ಲಿದೆ.

Petrol Diesel Price | ಪೆಟ್ರೋಲ್​, ಡೀಸೆಲ್ ದರದಲ್ಲಿ ಸ್ಥಿರತೆ.. ಇಂಧನ ದರ ಇಳಿಕೆಯತ್ತ ಮುಖ ಮಾಡುವುದು ಯಾವಾಗ?
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: shruti hegde

Updated on:Mar 01, 2021 | 11:14 AM

ಬೆಂಗಳೂರು: ದೇಶದಲ್ಲಿ ಇಂದು ಇಂಧನ ದರ ಸ್ಥಿರವಾಗಿದ್ದು, ದೆಹಲಿಯಲ್ಲಿ ಇದು ಪೆಟ್ರೊಲ್​ ದರ ಪ್ರತಿ ಲೀಟರಿಗೆ 91.17 ರೂಪಾಯಿಗೆ ಮಾರಟವಾಗುತ್ತಿದೆ. ಹಾಗೂ ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 93.11 ರೂಪಾಯಿ, ಕೊಲ್ಕತ್ತದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ​ 91.35 ರೂಪಾಯಿ ಹಾಗೂ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 97.57 ರೂಪಾಯಿಗೆ ಮಾರಾಟವಾಗುತ್ತಿದೆ.

ಡೀಸೆಲ್​ ದರದಲ್ಲೂ ಯಾವುದೆ ಬದಲಾವಣೆ ಕಂಡುಬಂದಿಲ್ಲ. ಹಾಗಾಗಿ ಇಂದು ದೆಹಲಿಯಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 81.47 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 86.45 ರೂಪಾಯಿ, ಕೊಲ್ಕತ್ತದಲ್ಲಿ 84.35 ರೂಪಾಯಿ ಹಾಗೂ ಮುಂಬೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 88.60 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ.

ಇನ್ನೇನು ಇಂಧನ ದರ ಬೆಂಗಳೂರಿನಲ್ಲಿ ಶತಕದ ಹಾದಿಯತ್ತ ಸಾಗುತ್ತಿದೆ. ಆದರೆ ಅದು ಶತಕ ಬಾರಿಸುವುದು ಗ್ಯಾರೆಂಟಿ ಎಂದು ಗ್ರಾಹಕರು ಕಂಗಾಲಾಗಿದ್ದಾರೆ. ಕೇಂದ್ರ ಸರಕಾರ ಈ ಕುರಿತಂತೆ ಗಮನ ಹರಿಸಲೇಬೇಕು. ಕೊರೊನಾದಿಂದಾಗಿ ಜನರಿಗೆ ಕೆಲಸ ಇಲ್ಲದಂತಾಗಿದೆ. ಇದರಿಂದ ಜನರು ಜೀವನ ನಡೆಸಲು ಕಷ್ಟವಾಗುತ್ತಿದೆ. ಇಂದು ಮತ್ತೆ ಸಿಲಿಂಡರ್​ ದರದಲ್ಲಿ 25 ರೂಪಾಯಿ ಏರಿಕೆಯಾಗಿರುದ್ದು, ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದು ಜನಸಾಮಾನ್ಯರ ಕೆಂಗಣ್ಣಿಗೆ ಕಾರಣವಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಲೇ ಇದ್ದವು. ಈ ಕಾರಣಕ್ಕಾಗಿ, ದೇಶದ ಅನೇಕ ನಗರಗಳಲ್ಲಿ, ಪೆಟ್ರೋಲ್ ಬೆಲೆ 100 ರೂಪಾಯಿಗಳನ್ನು ದಾಟಿದೆ. ಮುಂಬೈನಲ್ಲಿ ಪೆಟ್ರೋಲ್​ ದರ ಶತಕದ ಹಾದಿಯಲ್ಲಿದೆ. ನೈಸರ್ಗಿಕವಾಗಿ ಸಿಗುವ ಪೆಟ್ರೋಲಿಯಂಗೆ ಕಚ್ಚಾ ಎಣ್ಣೆ ಎಂದು ಕೂಡಾ ಕರೆಯಲಾಗುತ್ತದೆ. ಇದರ ನೇರ ಉಪಯೋಗ ಮಾಡಬಾರದು. ಉಪಯುಕ್ತ ವಸ್ತುಗಳಾದ ಪೆಟ್ರೋಲ್, ಸೀಮೆ ಎಣ್ಣೆ, ಡೀಸೆಲ್ ಎಣ್ಣೆ, ಕೀಲೆಣ್ಣೆ ಮುಂತಾದವುಗಳನ್ನು ಪೆಟ್ರೋಲಿಯಂನಿಂದ ತಯಾರಿಸುವ ವಿಧಾನಕ್ಕೆ ಪೆಟ್ರೋಲಿಯಂ ಸಂಸ್ಕರಣೆ ಎಂದು ಕರೆಯಲಾಗುತ್ತದೆ. ಮೊದಲು ಉತ್ಪನ್ನಗಳನ್ನು ಬೇರ್ಪಡಿಸಿ ನಂತರ ಅವುಗಳನ್ನು ಶುದ್ಧೀಕರಿಸಲಾಗುತ್ತದೆ.‌

ದೇಶದ ವಿವಿಧ ನಗರದಲ್ಲಿ ಪೆಟ್ರೋಲ್​ ದರ ನಗರ                   ದರ ಆಗ್ರಾ                   ₹89.07 ಅಹಮದಾಬಾದ್    ₹88.31 ಬೆಂಗಳೂರು           ₹94.22 ಭೂಪಾಲ್             ₹99.21 ಚೆನ್ನೈ                   ₹93.11 ದೆಹಲಿ                  ₹91.17 ಹೈದರಾಬಾದ್       ₹94.79 ಇಂದೋರ್           ₹99.30 ಜೈಪುರ್                ₹97.72 ಜಮ್ಮು                  ₹91.00 ಲಕ್ನೊ                   ₹89.31 ಮಂಗಳೂರು          ₹93.46 ಮೈಸೂರು             ₹93.83 ಪಾಟ್ನಾ                 ₹93.48

ಇದನ್ನೂ ಓದಿ: Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ

ಇದನ್ನೂ ಓದಿ: Petrol Diesel Price | ಪೆಟ್ರೋಲ್ ದರ ನರ್ವಸ್ ನೈಂಟೀಸ್​​ನಲ್ಲಿ.. ಶತಕ ಗ್ಯಾರೆಂಟಿ ಎಂದು ಗ್ರಾಹಕರು ಕಂಗಾಲು!

Published On - 10:25 am, Mon, 1 March 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್