ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ಗೆ ಪಿಐಎಲ್! ತುರ್ತು ವಿಚಾರಣೆಗೆ ಮನವಿ
ಕೆಪಿಸಿಸಿ ಪಾದಯಾತ್ರೆಯಿಂದ ಕೊರೊನಾ ಸೋಂಕು ಹಬ್ಬುತ್ತದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನ ಭೇಟಿ ಮಾಡಿದ್ದಾರೆ. ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನ ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಹೈಕೊರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಮನವಿ ಮಾಡಿದ್ದಾರೆ.
ಕೆಪಿಸಿಸಿ ಪಾದಯಾತ್ರೆಯಿಂದ ಕೊರೊನಾ ಸೋಂಕು ಹಬ್ಬುತ್ತದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನ ಭೇಟಿ ಮಾಡಿದ್ದಾರೆ. ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ. ಹೀಗಾಗಿ ಪಿಐಎಲ್ ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಮನವಿ ಮಾಡಿದ್ದಾರೆ. ಇಂದು ಮಧ್ಯಾಹ್ನ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ಸಮ್ಮತಿ ನೀಡಲಿದೆ.
ಕೊರೊನಾ ಯಾತ್ರೆ ಆಗುವುದು ಬೇಡ; ಆರಗ ಜ್ಞಾನೇಂದ್ರ ಮನವಿ ಕಾಂಗ್ರೆಸ್ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ ಅಂತ ಮಾಧ್ಯಮ ಪ್ರಕಟಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ದಯವಿಟ್ಟು ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮ ಕೈಬಿಡಿ. ಕೊರೊನಾ ಬಗ್ಗೆ ಕಾಂಗ್ರೆಸ್ನವರಿಂದ ಅಪಪ್ರಚಾರ, ವಿತಂಡ ವಾದ ಬೇಡ. ಪಾದಯಾತ್ರೆಗೆ ತೆರಳಿದ್ದ ಕೆಲವು ನಾಯಕರಿಗೆ ಕೊರೊನಾ ಬಂದಿದೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡುತ್ತಿದ್ದೇನೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದೀರಿ. ಕಾಂಗ್ರೆಸ್ ಪಕ್ಷದ ನಾಯಕರು ಜನರ ಕ್ಷಮೆ ಕೇಳಬೇಕಾಗಿದೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಇದನ್ನೂ ಓದಿ
ತಾಯಿಯನ್ನು ಪ್ರೀತಿಯಿಂದ ಮುದ್ದಾಡಿದ ಹುಲಿ ಮರಿ: ವಿಡಿಯೋ ವೈರಲ್
ಸೈನಾ ನೆಹ್ವಾಲ್ ಬಗ್ಗೆ ಕೆಟ್ಟ ಜೋಕ್: ಬಹಿರಂಗವಾಗಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ ಸಿದ್ದಾರ್ಥ್; ಪತ್ರ ವೈರಲ್
Published On - 11:15 am, Wed, 12 January 22